ಮಂಡ್ಯ: ‘ಜಿಲ್ಲೆಯಲ್ಲಿ ಎಲ್ಲವೂ ಸರಿ ಇಲ್ಲ. ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದವರಿಗೆ ಅಡಮಾನ ಇಡುವ ಪ್ರಯತ್ನ ಸ್ವಪಕ್ಷದ ಮುಖಂಡರಿಂದಲೇ ನಡೆಯುತ್ತಿದೆ’ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ನ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಹೆಸರು ಹೇಳದೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಆರೋಪಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜೆಡಿಎಸ್ ಪಕ್ಷವನ್ನು ಮುಗಿಸಲು ಮಾಜಿ ಸಚಿವರು ಮುಂದಾಗಿದ್ದಾರೆ. ಕಾಂಗ್ರೆಸ್, ಬಿಜೆಪಿ ಜೊತೆ ಸೇರಿ ಜೆಡಿಎಸ್ ಮುಗಿಸಲು ಯತ್ನಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ. ಈಗ ಬೇರೆ ಪಕ್ಷಕ್ಕೆ ಅಡಮಾನ ಇಡಲು ಹೊರಟಿದ್ದಾರೆ’ ಎಂದು ದೂರಿದರು. ಈ ಮೂಲಕ ಜಿಲ್ಲೆಯಲ್ಲಿ ಜೆಡಿಎಸ್ ಒಳಜಗಳ ಬಹಿರಂಗಗೊಂಡಿದೆ. ‘ಬಿಜೆಪಿ, ಕಾಂಗ್ರೆಸ್ನ ಅತೃಪ್ತ ಆತ್ಮಗಳೊಂದಿಗೆ ಸೇರಿಸಿಕೊಂಡು ಜೆಡಿಎಸ್ ಅನ್ನು ಹೈಜಾಕ್ ಮಾಡುವ ಹಾಗೂ ಅನಗತ್ಯವಾಗಿ ಜಿಲ್ಲೆಯಲ್ಲಿ ಜೆಡಿಎಸ್ ವಾತಾವರಣವನ್ನು ಕೆಡಿಸುವ ಪ್ರಯತ್ನ ನಡೆದಿದೆ’ ಎಂದು ಆರೋಪಿಸಿದರು.

‘ಒಂದೂವರೆ ವರ್ಷದ ಹಿಂದೆ ಕಾಂಗ್ರೆಸ್ ಬಾಗಿಲನ್ನು ತಟ್ಟಿದ್ದ ಆ ಮುಖಂಡರು ಅವರ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ರಾಜಿ ಮಾಡುತ್ತಿಲ್ಲ. ಆದರೆ, ಜಿಲ್ಲೆಯ ಇತರ ಕ್ಷೇತ್ರಗಳಲ್ಲಿ ಜೆಡಿಎಸ್ ಬೇರೆ ಪಕ್ಷದವರಿಗೆ ಅಡಮಾನ ಇಡಲು ಹೊರಟಿದ್ದಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-14-1548963861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.