ಬೆಂಗಳೂರು: ‘ಮಂಡ್ಯದಲ್ಲಿ ನಡೆದಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಲು ಸಂಬಂಧಪಟ್ಟವರ ಸಭೆ ಕರೆಯಬೇಕು’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದಿನೇಶ್ ಪತ್ರ ಬರೆದಿದ್ದಾರೆ.

ಸಾಹಿತಿ ಗೊ.ರು. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮ್ಮೇಳನದಲ್ಲಿ, ‘ಕನ್ನಡ ಭಾಷಾ ಅಭಿವೃದ್ಧಿ ಕಾಯ್ದೆ– 2022ರ ಜಾರಿ, ಸರ್ಕಾರಿ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ ಸೇರಿ ಮೂಲಸೌಕರ್ಯಗಳನ್ನು ಒದಗಿಸುವುದು, ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಸರೋಜಿನಿ ಮಹಿಷಿ ವರದಿ ಅನುಷ್ಠಾನ, ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ, ರಾಷ್ಟ್ರಕವಿ ಪ್ರಶಸ್ತಿ ಘೋಷಿಸುವ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು.

ಈ ಗಂಭೀರ ನಿರ್ಣಯಗಳ ಕುರಿತು ಚರ್ಚಿಸಲು ತಕ್ಷಣವೇ ಒಂದು ಸಭೆ ಆಯೋಜಿಸುವ ಜೊತೆಗೆ ಅವುಗಳನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಆದೇಶ ಹೊರಡಿಸಬೇಕು ಎಂದೂ ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರಿಗೂ ಈ ಪತ್ರವನ್ನು ಕಳುಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.