ಬೆಂಗಳೂರು: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರಗಳು ನಡೆಯುತ್ತಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆತಂಕ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಖಂಡಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ ಆವರಣದಲ್ಲಿ, ಹಾಡಹಗಲೇ ನಡೆದಿರುವ ಈ ಕೃತ್ಯವು ರಾಜ್ಯದಲ್ಲಿನ ಅರಾಜಕತೆಗೆ ಹಿಡಿದ ಕನ್ನಡಿ. ಬಿಜೆಪಿ ಅವಧಿಯಲ್ಲಿ ಅತ್ಯಾಚಾರ ನಡೆದಿಲ್ಲವಾ ಎಂದು ಮುಖ್ಯಮಂತ್ರಿ ಪ್ರಶ್ನಿಸಿರುವುದು, ಸರ್ಕಾರದ ಸಂವೇದನಾರಹಿತ ಧೋರಣೆ ಮತ್ತು ಅಲಕ್ಷ್ಯವನ್ನು ತೋರಿಸುತ್ತಿದೆ’ ಎಂದಿದ್ದಾರೆ.

‘ಆಕಸ್ಮಿಕ ಗೃಹ ಸಚಿವ ಪರಮೇಶ್ವರ ಅವರೇ, ಮೂವರು ಕಾಮುಕರನ್ನು ಪತ್ತೆ ಹಚ್ಚಿ, ಕಾನೂನಿನ ವಶಕ್ಕೆ ಒಪ್ಪಿಸಿ. ಮಹಿಳೆಯರ ಸುರಕ್ಷತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಡಿನ ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವ ಗ್ಯಾರೆಂಟಿ ನೀಡಿ’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.