ಮಂಡ್ಯ: ‘ಒಳ ಮೀಸಲಾತಿ ಎಂಬುದು ಸಾಮಾಜಿಕ ನ್ಯಾಯದ ಪರಿಕಲ್ಪನೆಯಾಗಿದೆ. ಎಲ್ಲ ಸಮುದಾಯಗಳಿಗೂ ಹಂಚಿಕೊಂಡು ತಿನ್ನುವು ನೀತಿಯಾಗಿದೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ತೀರ್ಮಾನ ಕೈಗೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು’ ಎಂದು ರಾಜ್ಯಸಭಾ ಮಾಜಿ ಸದಸ್ಯ ಎಲ್. ಹನುಮಂತಯ್ಯ ಒತ್ತಾಯಿಸಿದರು.

ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

‘35 ವರ್ಷಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬಂದಿದೆ. ಆದರೆ, ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ರಾಜ್ಯ ಸರ್ಕಾರ ಒಳಮೀಸಲಾತಿ ಪರವಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಮುಂದಾಗದಿರುವುದು ಸರಿಯಾದ ಬೆಳವಣಿಗೆಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಹೋರಾಟಗಾರ ಬಸವರಾಜ್ ಕೌತಾಳ್ ಮಾತನಾಡಿ, ‘ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ 2 ವರ್ಷ ಕಳೆದರೂ ನೆಪ ಹೇಳಿ ಸಮುದಾಯವನ್ನು ಕಾಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಮಾದಿಗ ಸಮಾಜದ ಶತ್ರುಗಳಾಗಿದ್ದಾರೆ. ಇವರು ಇನ್ನಾದರೂ ನೆಪ ಹೇಳದೆ ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದರಲ್ಲಿ ತೀವ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಇದೇ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಹೋರಾಟಗಾರ ಎಸ್. ಮಾರಪ್ಪ ಹಿರಿಯ, ಎಚ್. ಹನುಮಂತಪ್ಪ, ಅಂಬಣ್ಣ ಆರೋಲಿಕರ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪ್ರಸನ್ನ ಚಕ್ರವರ್ತಿ, ಎನ್.ಆರ್. ಚಂದ್ರಶೇಖರ್, ಸಿ.ಕೆ. ಪಾಪಯ್ಯ ಹಾಗೂ ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-40-466935375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.