ಮಂಡ್ಯ: ‘ಟನ್ ಕಬ್ಬಿಗೆ ಕೇವಲ ₹100 ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನೀತಿ ರೈತರಿಗೆ ಮಾಡಿರುವ ಅಪಮಾನವಾಗಿದ್ದು, ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು’ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.

10.25 ಸಕ್ಕರೆ ಇಳುವರಿಗೆ ಎಫ್ಆರ್ಪಿ ₹3,650 ಹಾಗೂ ಶೇ 9.50 ಸಕ್ಕರೆ ಇಳುವರಿಗೆ ಟನ್ ₹3,383 ನಿಗದಿಪಡಿಸಿರುವ ಕೇಂದ್ರ ಸರ್ಕಾರದ ಕ್ರಮವು ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮಣಿದಿದೆ ಎಂದು ಆರೋಪಿಸಿದೆ. ಒಂದು ಟನ್ ಕಬ್ಬು ಬೆಳೆಯಲು ಉತ್ಪಾದನಾ ವೆಚ್ಚವನ್ನು ಕೇಂದ್ರ ಸರ್ಕಾರ ಕೇವಲ ₹1,820 ಎಂದು ಅಂದಾಜಿಸಿದೆ. ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಟನ್ ಕಬ್ಬು ಬೆಳೆಯಲು ಕನಿಷ್ಠ ₹3,580 ಬೇಕೆಂದು ಮೂರು ವರ್ಷಗಳ ವರದಿಯೇ ಹೇಳುತ್ತದೆ. ಇದಕ್ಕೆ ಶೇ 10ರಷ್ಟು ಲಾಭಾಂಶ ಸೇರಿಸಿ ₹3,938 ನೀಡಬೇಕು ಎಂದು ಆಗ್ರಹಿಸಿದೆ. ಹರಿಯಾಣ, ಪಂಜಾಬ್,ತಮಿಳುನಾಡುಮಾದರಿಯಲ್ಲಿ ಕರ್ನಾಟಕ ಸರ್ಕಾರವು ಟನ್ಗೆ ₹500 ಎಸ್ಎಪಿ ನಿಗದಿ ಮಾಡಬೇಕು. ಕಳೆದ ಸಾಲಿನ ₹100 ಎಸ್ಎಪಿ ಹಣ ನೀಡಿಲ್ಲ. ಇಲ್ಲಿ ಸಕ್ಕರೆ ಕಾರ್ಖಾನೆಗಳ ಕೈಗೊಂಬೆಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿವೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಎನ್. ಭರತ್ರಾಜ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-140880628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.