ರಾಮನಗರ: ‘ಮಂಡ್ಯ ವಿಶ್ವವಿದ್ಯಾಲಯ ಮುಚ್ಚುವ ಕುರಿತು ಸ್ಪಷ್ಟತೆ ಇಲ್ಲ. ಈ ಬಗ್ಗೆ ಅಧ್ಯಯನ ಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಂಪುಟ ಉಪ ಸಮಿತಿಯ ಅಂತಿಮ ವರದಿ ಕುರಿತು ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.

‘ಹಿಂದಿನ ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿತ್ತು. ರಾಜಕೀಯ ಸೇರಿ ವಿವಿಧ ಕಾರಣಗಳಿಗಾಗಿ ವಿಶ್ವವಿದ್ಯಾಲಯಗಳನ್ನು ವಿಭಜಿಸಲಾಗಿದೆ. ಮೈಸೂರು ವಿಶ್ವವಿದ್ಯಾಲಯ ಹಾಗು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ವಿಶೇಷ ಗೌರವವಿತ್ತು. ಈಗ ಪ್ರತಿ ಜಿಲ್ಲೆಯಲ್ಲೂ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದರು.

‘ಮಂಡ್ಯ ವಿವಿ ಮುಚ್ಚಿದರೆ ಬೆಂಕಿ ಹಾಕುತ್ತೇವೆ’ ಎಂದು ಶಾಸಕ ಗಣಿಗ ರವಿ ಹೇಳಿಕೆ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ‘ಉಹಾಪೋಹದ ಮೇಲೆ ಏನೇನೊ ಮಾತನಾಡುವುದು ಸರಿಯಲ್ಲ. ಆ ಬಗ್ಗೆ ಸಂಪುಟದಲ್ಲಿ ಅಂತಿಮ ನಿರ್ಧಾರವಾಗಲಿದೆ. ಮಂಡ್ಯ ಎಂಎಲ್ಎ ಸ್ಥಳೀಯರ ಮುಂದೆ ಏನು ಹೇಳಬೇಕೋ ಹೇಳುತ್ತಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-40-1023765198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.