ರಾಮನಗರ: ‘ಮಂಡ್ಯ ವಿಶ್ವವಿದ್ಯಾಲಯ ಮುಚ್ಚುವ ಕುರಿತು ಯಾವುದೇ ಸ್ಪಷ್ಟತೆ ಇಲ್ಲ. ಈ ಬಗ್ಗೆ ಅಧ್ಯಯನ ಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿ ಚರ್ಚಿಸಲಾಗಿದೆ. ಸಮಿತಿಯ ಅಂತಿಮ ವರದಿ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.

‘ಮಂಡ್ಯ ವಿವಿ ಮುಚ್ಚಿದರೆ ಬೆಂಕಿ ಹಾಕುತ್ತೇವೆ’ ಎಂದು ಶಾಸಕ ಗಣಿಗ ರವಿ ಹೇಳಿಕೆ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಂಡ್ಯ ಎಂಎಲ್ಎ ಪಾಪ. ಸ್ಥಳೀಯರ ಮುಂದೆ ಏನು ಹೇಳಬೇಕೋ ಹೇಳುತ್ತಾರೆ. ಉಹಾಪೋಹದ ಮೇಲೆ ಏನೇನೊ ಮಾತನಾಡುವುದು ಸರಿಯಲ್ಲ. ವಿವಿ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಳ್ಳಲಿದೆ’ ಎಂದರು.

‘ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅವೈಜ್ಞಾನಿಕವಾಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಸೇರಿದಂತೆ ವಿವಿಧ ಕಾರಣಗಳಿಗಾಗಿ ವಿಭಜಿಸಲಾಗಿದೆ. ಹಳೆಯದಾದ ಮೈಸೂರಿನ ಮಾನಸ ಗಂಗೋತ್ರಿ, ಧಾರವಾಡದ ಕರ್ನಾಟಕ ವಿವಿಗಳಿಗೆ ತನ್ನದೇ ಆದ ಗೌರವ ಇತ್ತು. ಜಿಲ್ಲೆಗಳಲ್ಲಿ ಆರಂಭಗೊಂಡ ವಿವಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದು ತಿಳಿಸಿದರು.

ಗ್ಯಾರಂಟಿ, ಅಭಿವೃದ್ಧಿಗೆ ಮತ: ‘ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ ಜನ ಮತ ಹಾಕಿರುವುದರಿಂದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ’ ಎಂದು ಉಪ ಚುನಾವಣೆ ಫಲಿತಾಂಶ ಕುರಿತ ಪ್ರಶ್ನೆಗೆ ಸುಧಾಕರ್ ಪ್ರತಿಕ್ರಿಯಿಸಿದರು.

‘ನಿರೀಕ್ಷೆಯಂತೆ ಫಲಿತಾಂಶ ನಮ್ಮ ಪರವಾಗಿ ಬಂದಿದೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ನಾವು ಒತ್ತು ನೀಡಿದ್ದೇವೆ. ಆಂಧ್ರಪ್ರದೇಶದಲ್ಲೂ ದೊಡ್ಡ ಮಟ್ಟದ ಗ್ಯಾರಂಟಿಗಳನ್ನು ಕೊಟ್ಟರೂ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಆಗಿಲ್ಲ. ಆದರೆ, ನಮ್ಮಲ್ಲಿ ಎರಡನ್ನೂ ಸಮರ್ಥವಾಗಿ ನಿಭಾಯಿಸಿದ್ದೇವೆ. ಇದರಿಂದಾಗಿ ನಾವು ಜನರ ವಿಶ್ವಾಸ ಗಳಿಸಲು ಸಾಧ್ಯವಾಯಿತು’ ಎಂದರು.

ಆಡಳಿತ ವಿರೋಧಿ ಅಲೆ: ‘ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಸತತ ಮೂರು ಬಾರಿ ಗೆದ್ದು, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿದ್ದರು. ಇದರಿಂದಾಗಿ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇರುತ್ತದೆ. ಜೊತೆಗೆ ಎಸ್ಐಆರ್ನಿಂದಾಗಿಯೂ ಆ ಪಕ್ಷಕ್ಕೆ ಹೊಡೆತ ಬಿದ್ದಿದೆ. ಅಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ನಿರೀಕ್ಷೆಯನ್ನು ಮಾಡಿರಲಿಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-14-885141947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.