ಮಂಡ್ಯ: ‘ಬೇಸಿಗೆ ಸಂದರ್ಭದಲ್ಲಿ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ನೀರಿನ ಸಮಸ್ಯೆಗೆ ತುರ್ತಾಗಿ ಸ್ಪಂದಿಸದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿಮಗೆ ವೇತನ, ವಾಹನ ಸೇರಿದಂತೆ ಸಕಲ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಇಲಾಖೆ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಜನರ ಸಮಸ್ಯೆಗೆ ಸ್ಪಂದಿಸಬೇಕು. ಪಿಡಿಒಗಳಿಂದ ತಹಶೀಲ್ದಾರ್ವರೆಗೆ ಕ್ರಮ ಜರುಗಿಸಲಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಬರಗಾಲದ ಛಾಯೆ ಕಾಣುತ್ತಿದೆ. ಈ ವರ್ಷ ಮಳೆ ಕೊರತೆಯಾಗುವ ಹವಾಮಾನ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಮುಖ್ಯಮಂತ್ರಿಯವರು ಡಿಸಿ, ಸಿಇಒಗಳ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಈ ಆರ್ಥಿಕ ವರ್ಷದ ಕಾಮಗಾರಿಗಳಿಗೆ ಕ್ರಿಯಾಯೋಜನೆ ರೂಪಿಸಿ, ಅನುಮೋದನೆಯನ್ನು ಜೂನ್ ಒಳಗೆ ಪಡೆಯಬೇಕು. ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ‘ಕಾರ್ಯಪಡೆ’ (ಟಾಸ್ಕ್ಫೋರ್ಸ್) ಸಮಿತಿ ಸಭೆಗಳನ್ನು ನಡೆಸಬೇಕು. ನೀರಿಗೆ ಯಾವುದೇ ಅನುದಾನದ ಕೊರತೆ ಇಲ್ಲ’ ಎಂದು ಹೇಳಿದರು.

67 ಹಳ್ಳಿಗಳಲ್ಲಿ ಜಲಸಂಕಟ: ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು ಮಾತನಾಡಿ, ‘ಪ್ರಸ್ತುತ ಬೇಸಿಗೆಯ ಬೇಗೆ ಅಧಿಕವಾಗಿದ್ದು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ತೀವ್ರವಾಗಿದೆ. 67 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಹೇಮಾವತಿ ಅಣೆಕಟ್ಟೆಯಲ್ಲಿ ಪ್ರಸ್ತುತ 17.50 ಟಿಎಂಸಿ ಶೇಖರಣೆಯಾಗಿದೆ. ತುಮಕೂರು ಜಿಲ್ಲಾಡಳಿತದ ಮನವಿ ಮೇರೆಗೆ 1.8 ಟಿಎಂಸಿ ನೀರು ಹರಿಸಲು ಕ್ರಮ ವಹಿಸಲಾಗಿದೆ. ಅದರಂತೆ ಮಂಡ್ಯ ಜಿಲ್ಲಾಡಳಿತವು ಪತ್ರ ವ್ಯವಹಾರ ನಡೆಸಿ 2 ಟಿಎಂಸಿ ನೀರು ಹರಿಸಲು ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು. ಕೊಳವೆಬಾವಿ ಬತ್ತಿದ ಕಡೆಗಳಲ್ಲಿ ಹೊಸ ಕೊಳವೆಬಾವಿ ಕೊರೆಸಲು ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಹೆಚ್ಚಿನ ಅನುದಾನ ನೀಡಿ: ಮಂಡ್ಯ ಶಾಸಕ ಪಿ.ರವಿಕುಮಾರ್ ಮಾತನಾಡಿ, ‘ಬಸರಾಳು, ಬೇಬಿ ವ್ಯಾಪ್ತಿಯ 14 ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಬಗ್ಗೆ ವರದಿ ಪಡೆಯಲಾಗಿದೆ. ಮೋಳೆಕೊಪ್ಪಲು ಗ್ರಾಮಕ್ಕೆ ಕಳೆದೆರಡು ವರ್ಷಗಳಿಂದ ಖಾಸಗಿ ಬೋರ್ ವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಹೊಸ ಬೋರೆವೆಲ್ ಕೊರೆಸಲು ಹೆಚ್ಚು ಅನುದಾನ ನೀಡಿದರೆ ನೆರೆಯ ಗ್ರಾಮಗಳಲ್ಲಿ ಬೋರ್ವೆಲ್ ಕೊರೆಸಿ ಪೈಪ್ಲೈನ್ ಮೂಲಕ ನೀರು ಪೂರೈಕೆ ಸಾಧ್ಯ. ಈ ಬಗ್ಗೆ ಸಚಿವರು ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು. ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ‘ಬೇಸಿಗೆ ಹಾಗೂ ಬರಗಾಲ ಬರುವ ಮುಂಚೆಯೇ ನೀರಿನ ಸಮಸ್ಯೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಜಲಮೂಲಗಳಿಂದ ಶಾಶ್ವತ ನೀರು ಒದಗಿಸುವ ಜಾಲವನ್ನು ಕಂಡು ಹಿಡಿದರೆ ಇಂತಹ ಸಮಯದಲ್ಲಿ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಬಹುದು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಾಧಕರಿಗೆ ಸನ್ಮಾನ: ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ನಾಗಮಂಗಲ ತಾಲ್ಲೂಕಿನ ಕರಡಹಳ್ಳಿಯ ಧನಂಜಯ (554ನೇ ರ್ಯಾಂಕ್) ಮತ್ತು ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ಮುತ್ತೇಗೌಡ (622ನೇ ರ್ಯಾಂಕ್) ಪರವಾಗಿ ತಂದೆ ಶಿವರಾಮು ಅವರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಎಸ್. ಎಸ್. ಎಲ್ ಸಿ. ಹಾಗೂ ದ್ವೀತಿಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಕುಮಾರ, ಸಿಇಒ ಕೆ.ಆರ್.ನಂದಿನಿ, ಎಸ್ಪಿ ವಿ.ಜೆ.ಶೋಭಾರಾಣಿ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-40-1604152699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.