ಮದ್ದೂರು: ‘ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮಸೂದೆ ವಿರುದ್ಧ ಮತ ಹಾಕಿವೆ’ ಎಂದು ಆರೋಪಿಸಿ ಜೆಡಿಎಸ್ ತಾಲ್ಲೂಕು ಮಹಿಳಾ ಘಟಕದ ವತಿಯಿಂದ ನಗರದ ಐಬಿ ವೃತ್ತದಲ್ಲಿ ಬುಧವಾರ ರಸ್ತೆ ತಡೆ ನಡೆಯಿತು.

‘ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳಿಂದ ಅಪಮಾನ ಹಾಗೂ ಹಿನ್ನೆಡೆಯಾಗಿದ್ದು, ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ 33ರಷ್ಟು ಮೀಸಲಾತಿ ನೀಡುವ ವಿಧೇಯಕವನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತಯಾರಾಗಿದ್ದರೂ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ವಿಧೇಯಕ ಮಂಡನೆಗೆ ಅಸಹಕಾರ ತೋರಿದ್ದರಿಂದ ವಿಧೇಯಕ ವಿಫಲವಾಯಿತು’ ಎಂದು ಜೆಡಿಎಸ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಚಂದ್ರ ಶೆಟ್ಟಿ ಆರೋಪಿಸಿದರು.

‘ಕಾಂಗ್ರೆಸ್ನ ಈ ನಡೆಯಿಂದ ಮಹಿಳೆಯರ ನ್ಯಾಯಬದ್ಧ ಹಕ್ಕುಗಳಿಗೆ ಧಕ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಎದುರಿಸಲಿದ್ದು, ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಎಚ್ಚರಿಸಿದರು.

ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಯಿತು. ಬಳಿಕ ಪ್ರತಿಭಟನನಿರತರು ನಗರದ ಪೇಟೆಬೀದಿಯ ಮುಖಾಂತರ ತಾಲ್ಲೂಕು ಕಚೇರಿಗೆ ತೆರಳಿ ಧರಣಿ ನಡೆಸಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರೇಡ್ –2 ತಹಶೀಲ್ದಾರ್ ಸೋಮ ಶೇಖರ್ ಅವರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ತಾಲ್ಲೂಕು ಘಟಕದ ತಾಲ್ಲೂಕು ಅಧ್ಯಕ್ಷೆ ಶ್ವೇತಾ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಚೌಡಮ್ಮ, ಮುಖಂಡರಾದ ಪ್ರವೀಣ್, ಹುಲಿಕೆರೆ ನಟರಾಜು ಮಹೇಶ್, ಮಲ್ಲರಾಜು, ಜುನೈದ್, ಕುಂದನಕುಪ್ಪೆ ಕುಮಾರ್, ಪ್ರೇಮಾ, ಪದ್ಮ, ಅನಿತಾ, ಗ್ರಾ. ಪಂ ಮಾಜಿ ಅಧ್ಯಕ್ಷೆ ನಳಿನಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-1904380380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.