ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಎರಡು ಕಾಡುಕೋಣಗಳನ್ನು ಸೆರೆ ಹಿಡಿದ ಅರಣ್ಯ ಇಲಾಖೆ ತಂಡ

Last Updated 5 ಮೇ 2020, 7:04 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹೃದಯಭಾಗದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು, ನಗರದಲ್ಲಿ ರಾಜರೋಷವಾಗಿ ಸುತ್ತಾಡುತ್ತಿರುವ ಕಾಡುಕೋಣ ನೋಡಿ ಜನರು ಗಾಬರಿಯಾಗಿದ್ದರು. ಮಧ್ಯಾಹ್ನದ ವೇಳೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾಡುಕೋಣ ಸೆರೆ ಹಿಡಿದಿದ್ದಾರೆ.

ಬಿಜೈ ಕಾಪಿಕಾಡ್‌ನ ಹ್ಯಾಟ್ ಹಿಲ್ ಬಳಿ ಹಾಗೂ ಮಣ್ಣಗುಡ್ಡೆಯ ವೇರ್ ಹೌಸ್ ಬಳಿ ಕಾಡುಕೋಣಗಳು ಪ್ರತ್ಯಕ್ಷವಾಗಿದೆ. ಇನ್ನು ಜನನಿಬಿಡ ಪ್ರದೇಶದಲ್ಲಿ ಹೀಗೆ ಒಂಟಿ ಕಾಡುಕೋಣಗಳು ಪ್ರತ್ಯಕ್ಷವಾದ ಪರಿಣಾಮ ಸ್ಥಳೀಯರು ಭಯಭೀತರಾಗಿದ್ದರು. ಈ ಬಗ್ಗೆ ಪೊಲೀಸರಿಗೆ ಸುದ್ದಿ ಸಿಗುತ್ತಿದ್ದಂತೆ ಅರಣ್ಯ ಇಲಾಖೆಗೆ ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ತಂಡ ಕಾಡುಕೋಣ ಹಿಡಿಯುವ ಕಾರ್ಯಾಚಣೆ ನಡೆಸಿತು.

ಮಧ್ಯಾಹ್ನದವರೆಗೆ ಕಾಡುಕೋಣಗಳನ್ನು ಸೆರೆ ಹಿಡಿಯುವುದು ಸಾಧ್ಯವಾಗಿರಲಿಲ್ಲ. ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಜನರ ಓಡಾಟವೂ ಇದ್ದು, ಕಾರ್ಯಾಚರಣೆ ನಡೆಸಲು ಸ್ವಲ್ಪ ತೊಂದರೆ ಆಗಿತ್ತು. ಇದೀಗ ಕಾಡುಕೋಣಗಳನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಜ್ಪೆ, ಅದ್ಯಪಾಡಿ ಅರಣ್ಯ ಪ್ರದೇಶದ ಸುತ್ತಮುತ್ತ ಕಾಡುಕೋಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅಲ್ಲಿಂದ ಬಂದಿರುವ ಸಾಧ್ಯತೆ ಇರಬಹುದೆಂದು ಅರಣ್ಯ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದು, ಲಾಕ್‌ಡೌನ್‌ನಿಂದ ಜನ ಸಂಚಾರವಿಲ್ಲದ ಕಾರಣ ಕಾಡುಕೋಣಗಳು ತಪ್ಪಿ ನಗರ ಪ್ರವೇಶಿಸಿರಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT