ಮಂಗಳೂರು: ‘ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಘಟಕದ ನೇತೃತ್ವದಲ್ಲಿ ಬಜರಂಗದಳ ಪ್ರಾಂತ ಸಂಯೋಜಕರ ಸಮಾವೇಶವನ್ನು ಏ.18 ಮತ್ತು 19ರಂದು ನಗರದ ಮಣ್ಣಗುಡ್ಡದ ಸಂಘನಿಕೇತನದಲ್ಲಿ ಆಯೋಜಿಸಲಾಗಿದೆ’ ಎಂದು ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಈ ಸಮಾವೇಶ ನಡೆಯುತ್ತದೆ. ಕೋವಿಡ್–19 ಇನ್ನಿತರ ಕಾರಣಗಳಿಂದ ಮುಂದೂಡಿಕೆಯಾಗಿದ್ದ ಸಮಾವೇಶವನ್ನು ಈಗ ಹಮ್ಮಿಕೊಳ್ಳಲಾಗಿದೆ. ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, ಜಂಟಿ ಪ್ರಧಾನ ಕಾರ್ಯದರ್ಶಿ ಸ್ಥಾಣು ಮಾಲಯನ್, ಬಜರಂಗದಳ ರಾಷ್ಟ್ರೀಯ ಸಂಯೋಜಕ ಕಿಶನ್ ಪ್ರಜಾಪತ್, ಕೇಂದ್ರೀಯ ಉಪಾಧ್ಯಕ್ಷ ಮೋಹನ್ ಮಂಗ್ಹಾನಿ, ಕ್ಷೇತ್ರೀಯ ಸಂಯೋಜಕ ಕುಮಾರಸ್ವಾಮಿ, ಪ್ರಾಂತ ಅಧ್ಯಕ್ಷ ದೀಪಕ್ ರಾಜಗೋಪಾಲ್, ಪ್ರಾಂತ ಕಾರ್ಯದರ್ಶಿ ಸುರೇಶ್ ಬಿ ಈ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಪಾಲ್ಗೊಳ್ಳುವರು ಎಂದರು.

ಬಜರಂಗದಳಕ್ಕೆ ರಾಜ್ಯವ್ಯಾಪಿ ಹೊಸ ಕಾರ್ಯಕರ್ತರ ಜೋಡಣೆ ಮತ್ತು ಸಂಘಟನೆ ವಿಸ್ತಾರ, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ, ಲವ್ ಜಿಹಾದ್ ಮುಕ್ತ ಹಿಂದೂ ಸಮಾಜ ನಿರ್ಮಾಣ, ಗೋ ರಕ್ಷಣೆ, ಹಿಂದೂ ಯುವಕರಿಗೆ ತರಬೇತಿ ನೀಡುವ ಮೂಲಕ ಸ್ವ ಉದ್ಯೋಗ ಕಲ್ಪಿಸುವುದು ಸೇರಿದಂತೆ ಐದು ಪ್ರಮುಖ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಏ.18ರಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಹಾಗೂ ಗೋಪೂಜೆ ನಡೆಸುವ ಮೂಲಕ ಕಿಶನ್ ಪ್ರಜಾಪತ್ ಸಮಾವೇಶ ಉದ್ಘಾಟಿಸುವರು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಜರಂಗದಳ ಪ್ರಾಂತ ಸಂಯೋಜಕ ಭುಜಂಗ ಕುಲಾಲ್, ವಿಭಾಗ ಸಂಯೋಜಕ ಪುನೀತ್ ಅತ್ತಾವರ, ಜಿಲ್ಲಾ ಸಂಯೋಜಕ ನವೀನ್ ಮೂಡುಶೆಡ್ಡೆ, ಪ್ರೀತಂ ಕಾಟಿಪಳ್ಳ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.