ಮಂಗಳೂರು: ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವುದನ್ನು ವಿರೋಧಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ಅಡ್ಡಿಯುಂಟುಮಾಡಿದೆ ಎಂದು ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಸೋಮವಾರ ಇಲ್ಲಿ ಜನಾ ಕ್ರೋಶ ಪ್ರತಿಭಟನಾ ಪಾದಯಾತ್ರೆ ನಡೆಯಿತು.

ಪಿವಿಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಬಿಜೆಪಿ ಕಾರ್ಯ ಕರ್ತರು ಮೆರವಣಿಗೆ ನಡೆಸಿದರು.

ಶಾಸಕ ವೇದವ್ಯಾಸ ಕಾಮತ್ ಮಾತ ನಾಡಿ, ‘ವಿಪಕ್ಷದವರಿಗೆ ಮಹಿಳೆ ಯರು ತಕ್ಕಪಾಠ ಕಲಿಸಲಿದ್ದಾರೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಪೂರ್ಣಿಮಾ, ‘ಕೇಂದ್ರ ಸರ್ಕಾರವು ರಾಜಕೀಯವಾಗಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಸಂಸತ್ತಿನಲ್ಲಿ ನಾರಿಶಕ್ತಿ ವಂದನಾ ಮಸೂದೆ ಮಂಡಿಸಿತ್ತು. ಕಾಂಗ್ರೆಸ್ ಸೇರಿದಂತೆ ವಿಪಕ್ಷ ಗಳು ಈ ಮಸೂದೆ ಸೋಲಿಸಿ, ಸಂಭ್ರಮಿಸಿದ್ದನ್ನು ಮಹಿಳಾ ಮೋರ್ಚಾ ಅದನ್ನು ಖಂಡಿಸುತ್ತದೆ’ ಎಂದರು.

ಮಹಿಳಾ ಮೋರ್ಚಾ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷೆ ಪೂರ್ಣಿಮಾ ರಾವ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿದರು.

ಬಿಜೆಪಿ ಪ್ರಮುಖರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಸಂಧ್ಯಾ ವೆಂಕಟೇಶ್, ಮಲಾಕ್ಷಿ, ಶಬರಿ ಶೆಟ್ಟಿ, ವಿನೋದ್ ಮೆಂಡನ್, ಭಾಸ್ಕರಚಂದ್ರ ಶೆಟ್ಟಿ, ರಾಮ ಪ್ರಸಾದ್, ಪ್ರವೀಣ್ ನಿಡ್ಡೇಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-29-510955518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.