ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ಗೆ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹94 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಮೊಹಮ್ಮದ್ ಶಾರೀಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯವು ಮಾನ್ಯ ಮಾಡಿತ್ತು. ಶಿಕ್ಷೆಯ ಪ್ರಮಾಣದ ಆದೇಶವನ್ನು ಕಾಯ್ದಿರಿಸಿತ್ತು.

2022ರ ನ.19ರಂದು ಸಂಜೆ 4.40ರ ಸುಮಾರಿಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೊದಲ್ಲಿ ಶಾರೀಖ್ ತೆರಳುವಾಗ (ಐಇಡಿ) ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಸ್ಫೋಟದ ರಭಸಕ್ಕೆ ಉಗ್ರನ ಜೊತೆ ಆಟೊ ಚಾಲಕ ಪುರುಷೋತ್ತಮ್ ಪೂಜಾರಿ ಸಹ ಗಂಭೀರ ಗಾಯಗೊಂಡಿದ್ದರು. ಬಾಂಬ್ ಸ್ಫೋಟ ಪ್ರಕರಣ ಸಂಬಂಧ 2024ರಲ್ಲಿ ಶಾರೀಕ್ ವಿರುದ್ಧ ನ್ಯಾಯಾಲಯಕ್ಕೆ ಎನ್.ಐ.ಎ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಐಎಸ್ ನಂಟು: ತನಿಖೆಯಿಂದ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಶಾರೀಕ್, ಐಎಸ್ ಹಾಗೂ ಸಿಮಿ ಉಗ್ರ ಸಂಘಟನೆಗಳಿಂದ ಪ್ರೇರಿತನಾಗಿದ್ದ. ಐಎಸ್ ಮಾಡ್ಯುಲ್ ಸದಸ್ಯನಾಗಿದ್ದ. 2020ರಲ್ಲಿ ಮಂಗಳೂರಿನ ಗೋಡೆ ಬರಹ ಹಾಗೂ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಗಳಲ್ಲೂ ಶಾರೀಕ್ ಭಾಗಿಯಾಗಿದ್ದ ಎಂಬುದು ಎನ್ಐಎ ತನಿಖೆಯಿಂದ ಪತ್ತೆಯಾಗಿತ್ತು.

ಧರ್ಮಸ್ಥಳ, ಕದ್ರಿ ಮಂಜುನಾಥ ದೇವಾಲಯ ಸೇರಿದಂತೆ ದಕ್ಷಿಣ ಭಾರತದ ದೇವಾಲಯಗಳಲ್ಲಿ ಬಾಂಬ್ ಸ್ಫೋಟಗೊಳಿಸುವುದಕ್ಕೆ ಇಬ್ಬರು ಸಂಚು ರೂಪಿಸಿದ್ದರು. ಕುಕ್ಕರ್ನಲ್ಲಿ ಸುಧಾರಿತ ಸ್ಪೋಟಕ ಸಾಧನಗಳನ್ನು ಇಟ್ಟು ದುಷ್ಕೃತ್ಯ ಎಸಗಲು ಮುಂದಾಗಿದ್ದರು. ಆದರೆ, 90 ನಿಮಿಷಗಳ ಬದಲು 9 ನಿಮಿಷಕ್ಕೆ ತಪ್ಪಾಗಿ ಸಮಯ ನಿಗದಿ ಪಡಿಸಿದ್ದರಿಂದ ಆಟೊದಲ್ಲಿ ತೆರಳುವಾಗಲೇ ಬಾಂಬ್ ಸ್ಫೋಟಗೊಂಡಿತ್ತು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿತ್ತು.
.ನವೀಕೃತ ಮನೆಗೆ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಕುಟುಂಬ.ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏಪ್ರಿಲ್ 27ರಂದು ಶಿಕ್ಷೆ ಪ್ರಮಾಣ ಪ್ರಕಟ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.