ಮಂಗಳೂರು: ನಗರ ವ್ಯಾಪ್ತಿಯಲ್ಲಿ ‘ಜನಗಣತಿ 2027’ ಕಾರ್ಯಕ್ಕಾಗಿ ಒಟ್ಟು 909 ಗಣತಿ ಸಿಬ್ಬಂದಿಯನ್ನು, 7 ಉಸ್ತು ವಾರಿ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದರು.

ಜನ ಗಣತಿ ಕುರಿತು ಇಲ್ಲಿ ಭಾನುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

'ಗಣತಿ ಸಿಬ್ಬಂದಿಗೆ ಕಡ್ಡಾಯ ತರಬೇತಿ ಆಯೋಜಿಸಲಾಗಿದೆ. ಕೆಲ ಸಿಬ್ಬಂದಿ ಸಮಂಜಸವಲ್ಲದ ಕಾರಣ ನೀಡಿ ತರಬೇತಿಗೆ ಗೈರಾಗಿದ್ದಾರೆ. ಜನಗಣತಿ ಕಾರ್ಯದ ಯಶಸ್ವಿ ಅನುಷ್ಠಾನಕ್ಕೆ ತರಬೇತಿ ಅತ್ಯಂತ ಮಹತ್ವದ್ದಾಗಿದ್ದು, ಇಂತಹ ಗೈರುಹಾಜರಿಯನ್ನು ಗಂಭೀರ ವಾಗಿ ಪರಿಗಣಿಸಲಾಗುತ್ತದೆ' ಎಂದರು.

‘ಎಲ್ಲಾ ಗಣತಿ ಸಿಬ್ಬಂದಿ ತಮ್ಮ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಲು ಬದ್ಧರಾಗಿರಬೇಕು. ಎಲ್ಲಾ ಉಸ್ತುವಾರಿ ಅಧಿಕಾರಿಗಳು ತಮ್ಮ ಅಧೀನದ ಗಣತಿ ಸಿಬ್ಬಂದಿಯ ಹಾಜರಾತಿಯನ್ನು ಖಚಿತಪಡಿಸಿ, ವರದಿ ಸಲ್ಲಿಸಬೇಕು. ಗೈರುಹಾಜರಾದ ಗಣತಿ ಸಿಬ್ಬಂದಿಗೆ 1948ರ ಭಾರತದ ಜನಗಣತಿ ಕಾಯ್ದೆಯ ನಿಯಮಗಳಡಿ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ತರಬೇತಿಗೆ ಅವರು ಕಡ್ಡಾಯವಾಗಿ ಹಾಜರಾಗಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಕಾನೂನು ಮತ್ತು ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಸಿದ್ದಾರೆ.

ಪಾಲಿಕೆ ಕಂದಾಯ ವಿಭಾಗದ ಉಪಾಯುಕ್ತೆ ಅಕ್ಷತಾ, ಉಸ್ತುವಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-29-706684299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.