ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ಗೆ ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 17ರಂದು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಪ್ರಕರಣಗಳ ವಿಶೇಷ ನ್ಯಾಯಾಲಯವು ಪ್ರಕಟಿಸಲಿದೆ.

ಮೊಹಮ್ಮದ್ ಶಾರೀಕ್ ಮೂರು ತಿಂಗಳ ಹಿಂದೆ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಮಾನ್ಯ ಮಾಡಿತ್ತು. ನ್ಯಾಯಾಲಯದಲ್ಲಿ ಶುಕ್ರವಾರ ಸಹ ವಿಚಾರಣೆ ನಡೆಯಿತು. ಏ.17ರಂದು ಅಪರಾಧಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ಆದೇಶಿಸಿದರು.

ಬಾಂಬ್ ಸ್ಫೋಟ ಪ್ರಕರಣ ಸಂಬಂಧ 2024ರಲ್ಲಿ ಶಾರೀಕ್ ವಿರುದ್ಧ ನ್ಯಾಯಾಲಯಕ್ಕೆ ಎನ್ಐಎ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2022ರ ನ.19ರಂದು ಸಂಜೆ 4.40ರ ಸುಮಾರಿಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೊದಲ್ಲಿ ಶಾರೀಕ್ ತೆರಳುವಾಗ ಕುಕ್ಕರ್ ಬಾಂಬ್ (ಐಇಡಿ) ಸ್ಫೋಟಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.