ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ಯಾಸ್ ಮಾಫಿಯಾಗಳು, ಅಮೇರಿಕ ಮತ್ತು ಇಸ್ರೇಲ್ ಸೇರಿ ಇರಾನ್ ಮೇಳೆ ನಡೆಸುತ್ತಿರುವ ಯುದ್ಧದಿಂದ ಎದುರಾದ ಬಿಕ್ಕಟ್ಟಿನ ಲಾಭ ಪಡೆಯುತ್ತಿವೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ವಿತರಣೆಯನ್ನು ವಿಳಂಬ ಮಾಡಿ ಅಕ್ರಮ ದಂಧೆಗಿಳಿದಿವೆ. ಈ ದಂಧೆಯನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಡಿವೈಎಫ್ಐ ಆರೋಪಿಸಿದೆ. ಎಲ್ಪಿಜಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಲ್ಲಿಸದಿದ್ದರೆ ಗ್ಯಾಸ್ ಏಜನ್ಸಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುತ್ತೇವೆ ಎಂದು ಡಿವೈಎಫ್ಐ ತಿಳಿಸಿದೆ.

ಎಲ್ಪಿಜಿ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸವೇಕು. ಅಡುಗೆ ಅನಿಲದ ಅಕ್ರಮ ದಂಧೆಗೆ ಜಿಲ್ಲಾಡಳಿತ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

‘ಅಡುಗೆ ಅನಿಲ ಪೂರೈಕೆ ವಿಷಯದಲ್ಲಿ ದೇಶವು ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಈ ನಡುವೆ ಅಡುಗೆ ಅನಿಲದ ಕೃತಕ ಅಭಾವ ಸೃಷ್ಟಿಸಿ, ಅಧಿಕ ಲಾಭ ಗಳಿಸುವ ಹುನ್ನಾರ ನಡೆದಿದ್ದು, ಇದರಿಂದ ಜನರ ಜೇಬಿಗೆ ಕತ್ತರಿ ಬೀಳುತ್ತಿದೆ’ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಕೆ.ಇಮ್ತಿಯಾಜ್ ಆರೋಪಿಸಿದರು.

‘ರಾಜ್ಯದಲ್ಲಿ ಎಲ್ಪಿಜಿ ಅಭಾವವಿದ್ದರೂ ಇಲ್ಲಿನ ಅಡುಗೆ ಅನಿಲ ಪೂರೈಕೆ ಕಂಪನಿಗಳ ಸ್ಥಾವರಗಳಿಂದ ಮಹಾರಾಷ್ಟ್ರಕ್ಕೆ ನಿತ್ಯ 300ರಷ್ಟು ಹೆಚ್ಚುವರಿ ಬುಲೆಟ್ ಟ್ಯಾಂಕರ್ಗಳು ಎಲ್ಪಿಜಿ ತುಂಬಿಸಿಕೊಂಡು ಹೋಗುತ್ತಿರುವುದು ಏಕೆ’ ಎಂದು ಅವರು ಪ್ರಶ್ನಿಸಿದರು.

ಡಿವೈಎಫ್ಐ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸಂತೋಷ್ ಬಜಾಲ್, ‘ಜನರು ಎಲ್ಪಿಜಿ ಸಿಲಿಂಡರ್ ಪಡೆಯಲು ಅನಿಲ ಪೂರೈಕೆ ಏಜನ್ಸಿಗಳ ಕಚೇರಿ ಮುಂದೆ ಸಾಲು ನಿಂತಿದ್ದಾರೆ. ಆದರು ಕೇಂದ್ರದ ಸಚಿವರು ದೇಶದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ ಎಂದು ಸುಳ್ಳು ಹೇಳಿಕೆ ಕೊಡುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರವೂ ನಾಗರಿಕರ ಸರಬರಾಜು ವ್ಯವಸ್ಥೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದೆ’ ಎಂದು ಆರೋಪಿಸಿದರು.

ಡಿವೈಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ರಿಜ್ವಾನ್ ಖಂಡಿಗ, ಖಜಾಂಚಿ ಮನೋಜ್ ವಾಮಂಜೂರು, ಮುಖಂಡರಾದ ನವೀನ್ ಕೊಂಚಾಡಿ, ತಯ್ಯುಬ್ ಬೆಂಗ್ರೆ, ಜಗದೀಶ್ ಬಜಾಲ್ ಖಾಲಿದ್ ಹರೇಕಳ, ತೌಸೀಫ್ ಬೈಕಂಪಾಡಿ, ಪ್ರವೀಣ್ ಕೊಂಚಾಡಿ, ಜನವಾದಿ ಮಹಿಳಾ ಸಂಘಟನೆ ಮುಖಂಡರಾದ ಭಾರತಿ ಬೋಳಾರ, ಯೋಗೀತಾ ಸುವರ್ಣ ಮೊಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-29-1320599712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.