ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮ ಜನರ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಆರೋಪಿಸಿರುವ ಸಿ.ಪಿ.ಐ.ಎಂ. ಲಿಬರೇಷನ್ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಯಿತು.

ಸಿ.ಪಿ.ಐ.ಎಂ. ಲಿಬರೇಷನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇಖಾಸಗಿ ಆಸ್ಪತ್ರೆಗಳ ಲಾಭದಾಸೆಗೆ ತಲೆಬಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳನ್ನು ಹಂತ ಹಂತವಾಗಿ ಖಾಸಗೀಕರಣದ ಹಾದಿಗೆ ಒಯ್ಯುತ್ತಿದೆ. ಇದು ಬಡಜನರ ಬದುಕಿನ ಮೇಲೆ ನಡೆಸುತ್ತಿರುವ ದಾಳಿಯಾಗಿದೆ. ಈ ಒಪ್ಪಂದ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸಬೇಕು ಎಂದರು.

ರಾಜ್ಯ ಸಮಿತಿ ಸದಸ್ಯರಾದ ಮೋಹನ್ ಕೊಡಗು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳು ಜನರ ಸಾಂವಿಧಾನಿಕ ಹಕ್ಕು. ಆ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ವನ್ನು ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖಂಡ ಮಹಮ್ಮದ್ ಲುಕ್ಮಾನ್, ತುಳಸೀದಾಸ್ ಆರ್, ಸುಧಾ ರಾವ್ ಬೆಳ್ತಂಗಡಿ ಮಾತನಾಡಿದರು. ಮೋಹನ್ ಕೆ.ಇ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಜೀವ ಬೆಳ್ತಂಗಡಿ, ಪ್ರಜ್ವಲ್, ರವಿ ಕೊಡಗು, ವಿಲ್ಲಿ ವಿಲ್ಸನ್, ಸರಸ್ವತಿ ಕಡೇಶಿವಾಲಯ, ಜಿಲಾನಿ ಮಂಗಳೂರು, ದೀಕ್ಷಾ ಬಜಾಲ್, ಸುಹೈಲ್, ಶೇಖರ ಪುತ್ತೂರು, ಸುಧಾ.ಜಿ.ರಾವ್ ಬೆಳ್ತಂಗಡಿ, ಕುಸುಮಾವತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-1523943765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.