ಮಂಗಳೂರು: ಜಾತ್ಯತೀತ ಜನತಾ ದಳದ ವರಿಷ್ಠ ಎಚ್.ಡಿ. ದೇವೇಗೌಡ ಅವರ 94ನೇ ಜನ್ಮದಿನದ ಅಂಗವಾಗಿ ಪಕ್ಷದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಸಮೀಪದ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಜಾಕೆ ಮಾಧವ ಗೌಡ ಉದ್ಘಾಟಿಸಿ, ‘ದೇವೇಗೌಡರು ತಮ್ಮ ರಾಜಕೀಯ ಜೀವನದುದ್ದಕ್ಕೂ ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳವರ ಸೇವೆ ಮಾಡಿದ್ದಾರೆ. ಆದ್ದರಿಂದ ಸೇವಾ ಕಾರ್ಯಗಳ ಮೂಲಕವೇ ಅವರ ಜನ್ಮದಿನ ಆಚರಿಸಲಾಗಿದೆ. ಯುವಜನತೆ ಇಂತಹ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದರು.

ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ ಮಾತನಾಡಿದರು.

ಮುಖಂಡರಾದ ವೈ. ಉಮೇಶ್ ಗೌಡ, ಮುನೀರ್ ಮುಕ್ಕಚೇರಿ, ಪ್ರಶಾಂತ್ ಭಟ್ ಕಡಬ, ಶಾರದ ಶೆಟ್ಟಿ ಅತ್ತಾವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಶಿಧರ್ ಎಂ. ಮತ್ತು ಇತರ ಕಾರ್ಯಕರ್ತರು ರಕ್ತದಾನ ಮಾಡಿದರು. ಶಿಬಿರದ ಬಳಿಕ ಜಪ್ಪುವಿನ ಭಗಿನಿ ಸಮಾಜಕ್ಕೆ ಭೇಟಿ ನೀಡಿದ ಮುಖಂಡರು ಅಲ್ಲಿನ ಮಕ್ಕಳಿಗೆ ಹಣ್ಣು- ಹಂಪಲು ಹಾಗೂ ಆಹಾರ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-29-1164272425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.