ಬೆಂಗಳೂರು: ‘ಕರಾವಳಿ ಭಾಗದ ಜನರಿಗೆ ತ್ವರಿತ ನ್ಯಾಯದಾನ ಕಲ್ಪಿಸಲು ಹಾಗೂ ಸರ್ವರಿಗೂ ನ್ಯಾಯದ ಲಭ್ಯತೆ ಖಚಿತಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕು’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ‘ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಿಂದ ನ್ಯಾಯದಾನದ ವಿಕೇಂದ್ರೀಕರಣ, ಸಕಾಲಿಕ ಹಾಗೂ ಕೈಗೆಟುಕುವ ನ್ಯಾಯದ ಸಾಂವಿಧಾನಿಕ ಭರವಸೆಯನ್ನು ಬಲಪಡಿಸಿದಂತಾಗಲಿದೆ’ ಎಂದಿದ್ದಾರೆ.

‘ಜೊತೆಗೆ, ಪ್ರಧಾನ ಪೀಠದ ಮೇಲಿನ ಬಾಕಿ ಪ್ರಕರಣಗಳ ಒತ್ತಡವು ಗಣನೀಯವಾಗಿ ತಗ್ಗಲಿದೆ. ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಸುಮಾರು 50 ಸಾವಿರ ಚದರ ಅಡಿ ವಿಸ್ತೀರ್ಣದ ಭೂಮಿ ಲಭ್ಯವಿದೆ. ಪೀಠವು ಸುಗಮವಾಗಿ ಕಾರ್ಯನಿರ್ವಹಿಸಲು ನಾಗರಿಕ, ಆಡಳಿತಾತ್ಮಕ ಮತ್ತು ಲಾಜಿಸ್ಟಿಕ್ ಮೂಲಸೌಕರ್ಯ ಒದಗಿಸಲು ಸರ್ಕಾರ ಸಿದ್ಧವಿದೆ’ ಎಂದೂ ತಮ್ಮ ಪತ್ರದ ಮೂಲಕ ಅವರು ನ್ಯಾಯಮೂರ್ತಿಯವರ ಗಮನಕ್ಕೆ ತಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.