ಮಂಗಳೂರು: ‘ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಲಪಡಿಸಲು ವೈದ್ಯಕೀಯ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆಮಾತನಾಡಿದ ಅವರು, ‘ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಗಳು, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದರು.

‘ಎ.ಜೆ. ವೈದ್ಯಕೀಯ ಕಾಲೇಜು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಯೆನಪೋಯ ವೈದ್ಯಕೀಯ ಕಾಲೇಜುಗಳೊಂದಿಗೆ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದರು.

ಒಪ್ಪಂದದಂತೆ, ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ, ಆಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಲಿವೆ. ಸ್ಥಳೀಯವಾಗಿಯೇ ತಜ್ಞ ವೈದ್ಯರ ಚಿಕಿತ್ಸೆ ಹಾಗೂ ಸುಧಾರಿತ ರೋಗನಿರ್ಣಯ ಸೌಲಭ್ಯಗಳು ಜನತೆಗೆ ಉಚಿತವಾಗಿ ದೊರೆಯಲಿವೆ ಎಂದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಇರುವ ವೈದ್ಯಕೀಯ ಕಾಲೇಜುಗಳ ಜೊತೆ ಈ ರೀತಿಯ ಒಪ್ಪಂದ ಮಾಡಿಕೊಳ್ಳಲಾಗುವುದು. ತುಮಕೂರಿನಲ್ಲಿ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಈ ಯೋಜನೆಯಿಂದ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗದು. ವೈದ್ಯಕೀಯ ಕಾಲೇಜುಗಳೇ ಸ್ವಯಂ ಪ್ರೇರಣೆಯಿಂದ ಈ ಹೊಣೆ ನಿರ್ವಹಿಸಲಿವೆ. ಆರೋಗ್ಯ ಕೇಂದ್ರಗಳ ಆಡಳಿತಾತ್ಮಕ ನಿಯಂತ್ರಣ ಸರ್ಕಾರಿ ವೈದ್ಯಾಧಿಕಾರಿಗಳ ಬಳಿ ಇರುತ್ತದೆ ಎಂದು ಹೇಳಿದರು.

ಒಪ್ಪಂದಕ್ಕೆ ಒಳಪಡುವ ಸರ್ಕಾರಿ ಆಸ್ಪತ್ರೆಗಳಿಗೆ ವರ್ಷದೊಳಗೆ ರಾಷ್ಟ್ರ ಮಟ್ಟದ ಗುಣಮಟ್ಟದ ಮಾನ್ಯತೆ ಪಡೆಯುವ ಹೊಣೆಯನ್ನು ಸಂಬಂಧಿತ ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಇದು ಹೊಸ ಮೈಲುಗಲ್ಲು ಆಗಲಿದೆ ಎಂದು ಸಚಿವರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-51-1138131629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.