ಮಂಗಳೂರು: ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಮಾ.24ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಸಮುದಾಯದ ಮುಖಂಡ ಪವನ್ಕುಮಾರ್ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭೋವಿ, ಬಂಜಾರ, ಕೊರಮ, ಕೊರಚ, ಛಲವಾದಿ ಮತ್ತು ಚರ್ಮಕಾರ ಸಮುದಾಯಗಳ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿ ನ್ಯಾ. ನಾಗಮೋಹನ್ದಾಸ್ ಆಯೋಗ ಸಲ್ಲಿರುವ ವರದಿಯಲ್ಲಿನ ದತ್ತಾಂಶವು ಪೂರ್ವಗ್ರಹ ಪೀಡಿತವಾಗಿದೆ. ಸೋರಿಕೆಯಾಗಿರುವ ವರದಿಯ ಅಂಶಗಳು ಅವೈಜ್ಞಾನಿಕವಾಗಿವೆ ಎಂದರು.

101 ಸಮುದಾಯಗಳು ಕಳೆದ 50 ವರ್ಷಗಳಿಂದ ಇರುವ ಸ್ಥಿತಿಗತಿಗಳ ಮಾಹಿತಿ ಪಡೆದು ಸಮೀಕ್ಷೆಯ ಸಮಗ್ರ ದತ್ತಾಂಶಗಳನ್ನು ಬಿಡುಗಡೆ ಮಾಡಬೇಕು, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಂದ ಆಕ್ಷೇಪಣೆ ಸ್ವೀಕರಿಸಲು ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1788223213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.