ಮಂಗಳೂರಿನ ಬಿಜೈನ ಕಲರ್ಸ್ ಯೂನಿಸೆಕ್ಸ್ ಸಲೂನ್ ಮೇಲೆ ಗುರುವಾರ ಮಧ್ಯಾಹ್ನ 12ರ ವೇಳೆಗೆ ಸುಮಾರು 10 ಜನರ ಗುಂಪು ದಾಳಿ ನಡೆಸಿ, ಅಲ್ಲಿಯ ವಸ್ತುಗಳನ್ನು ಧ್ವಂಸಗೊಳಿಸಿದೆ. ಸಲೂನ್ನಲ್ಲಿದ್ದ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ‘ಸಲೂನ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿತ್ತು. ನಮ್ಮ ಹುಡುಗರೇ ದಾಳಿ ನಡೆಸಿದ್ದಾರೆ’ ಎಂದು ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಉಡುಪಿಯಲ್ಲಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.