ಬೆಂಗಳೂರು: ‘ಸರ್ಕಾರದಿಂದ ಅನುಮತಿ ಪಡೆದೂ ನಿರ್ದಿಷ್ಟ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ಸುಗಳ ಪರವಾನಗಿಯನ್ನು ರದ್ದುಪಡಿಸಲು ಆರ್ಟಿಒ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 409 ಬಸ್ಸುಗಳು ಸಂಚರಿಸುತ್ತಿವೆ. ಅದರಲ್ಲಿ 364 ಖಾಸಗಿ, 45 ಸರ್ಕಾರಿ ಬಸ್ಸುಗಳಾಗಿವೆ. ಯಾವುದೇ ಖಾಸಗಿ ಬಸ್ಸುಗಳು ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸದೆ ಇದ್ದರೆ ಅವುಗಳ ಪರವಾನಗಿ ರದ್ದುಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಅದೇ ರೀತಿ ಯಾವುದೇ ಮಾರ್ಗದಲ್ಲಿ ಸರ್ಕಾರಿ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದ್ದಲ್ಲಿ ಪುನಾರಂಭಿಸಲು ಕ್ರಮ ವಹಿಸಲಾಗುವುದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1876986700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.