ಮಂಗಳೂರು: ಕೇಂದ್ರದ 15 ನೇ ಹಣಕಾಸು ಆಯೋಗ 2025-26 ನೆ ಸಾಲಿನಲ್ಲಿ ರಾಜ್ಯಕ್ಕೆ ₹ 2,133 ಕೋಟಿ ಅನುದಾನ ಬಿಡುಗಡೆ ಮಾಡಿಲ್ಲ. ಈ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದೇ ಇರುವುದೂ ಇದಕ್ಕೆ ಕಾರಣ. ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಇದ್ದರೆ ಮಾತ್ರ ಕೇಂದ್ರ ಹಣಕಾಸು ಆಯೋಗದ ಅನುದಾನ ಲಭಿಸುತ್ತದೆ. ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಸ್ಥಳೀಯ ಸಂಸ್ಥೆ ಚುನಾವಣೆಗೆ ಆಸಕ್ತಿಯನ್ನೇ ತೋರಿಲ್ಲ. ಸಂವಿಧಾನ ಬದ್ಧವಾಗಿ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಸಿಗಬೇಕಾದ ಅನುದಾನ ವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಕಳೆದು ಕೊಳ್ಳುವ ಸ್ಥಿತಿ ಎದುರಾಗಿದೆ’ ಎಂದರು.

‘ಚುನಾಯಿತ ಆಡಳಿತವಿದ್ದ ಗ್ರಾಮ ಪಂಚಾಯಿತಿಗಳಲ್ಲಿ ಕ್ರಿಯಾ ಯೋಜನೆ ತಯಾರಿಸಿ ಕೈಗೊಂಡ ಕಾಮಗಾರಿ ಗಳಿಗೂ ಅನುದಾನ ಬಿಡುಗಡೆಯಾಗಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 28 ಸಂಸದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಎಸ್ಡಿಪಿಐ ಕುರಿತು ಸಂಸತ್ತಿನಲ್ಲಿ ಮಾತನಾಡುವ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂತಹ ವಿಚಾರಗಳ ಬಗ್ಗೆ ಮೌನ ವಹಿಸುತ್ತಾರೆ. ಬಾಕಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ರಿಯಾಜ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್, ರಾಜ್ಯ ಸಮಿತಿ ಸದಸ್ಯ ಅಥಾ ವುಲ್ಲ ಜೋಕಟ್ಟೆ, ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.