ಮಂಗಳೂರು: ವಿಧಾನಸೌಧದ ನವೀಕೃತ ಮುಖ್ಯ ಪ್ರವೇಶ ದ್ವಾರವನ್ನು ಮಾ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಪ್ರಚಲಿತದಲ್ಲಿರುವ ಸುಂದರವಾದ ಕೆತ್ತನೆ ಇರುವ ಪ್ರವೇಶ ದ್ವಾರವನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಬಳಿ ಮತ್ತು ಹೈಕೋರ್ಟ್ ಕಡೆಯಿಂದ ಪ್ರವೇಶ ದ್ವಾರಗಳನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಅವರು ಹೇಳಿದರು.

ವಿಧಾನಸೌಧದಲ್ಲಿ ವಿದ್ಯುತ್ ಸ್ವಾವಲಂಬನೆ ದೃಷ್ಟಿಯಿಂದ ಒಂದು ಭಾಗದಲ್ಲಿ ಸೌರ ಫಲಕ ಅಳವಡಿಸಲಾಗಿದ್ದು, ಮಾ.25ರಂದು ಉದ್ಘಾಟನೆಯಾಗಲಿದೆ. ವಿಧಾನಸೌಧದ ಆವರಣದಲ್ಲಿರುವ ಬೀದಿನಾಯಿಗಳಿಗೆ ಶ್ವಾನ ಆಶ್ರಯ ತಾಣ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಯೋಜನೆಯನ್ನು ಸಲ್ಲಿಸಲಾಗಿದ್ದು, ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-29-410779837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.