ಮಂಗಳೂರು: ‘ಸಂವಿಧಾನಕ್ಕೆ 73ನೇ ಹಾಗೂ 74ನೇ ತಿದ್ದುಪಡಿ ತರುವ ಮೂಲಕ ದೇಶದ ಸ್ಥಳೀಯ ಸಂಸ್ಥೆ ಗಳಲ್ಲಿ ಮಹಿಳಾ ಮೀಸಲಾತಿಯನ್ನು ಮೊದಲು ಜಾರಿಗೊಳಿಸಿದ್ದೇ ಕಾಂಗ್ರೆಸ್. ಅದರಿಂದಾಗಿಯೇ ಬಹಳಷ್ಟು ಮಹಿಳೆಯರಿಗೆ ರಾಜಕೀಯ ಸ್ಥಾನಮಾನ ಪಡೆಯುಲು ಅವಕಾಶ ಸಿಕ್ಕಿದೆ. ಅನೇಕ ಮಹಿಳೆಯರು ನಾಯಕರಾಗಿ ಬೆಳೆದಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮ ವಾರ ಮಾತನಾಡಿದ ಅವರು, ‘ದೇಶದ ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿ, ಲೋಕಸಭೆಯ ಸ್ಪೀಕರ್ ಹುದ್ದೆಗಳು ಮೊದಲ ಸಲ ಮಹಿಳೆಯರಿಗೆ ದೊರಕಿದ್ದೇ ಕಾಂಗ್ರೆಸ್ನಿಂದಾಗಿ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನೂ ಮಹಿಳೆಯರು ಅಲಂಕರಿಸಿದ್ದಾರೆ. ಮಹಿಳೆಯರ ಪ್ರಾತಿನಿಧ್ಯ ನೀಡುವ ವಿಚಾರದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಸಾಕಷ್ಟು ಮುಂದಿದೆ. ಬಿಜೆಪಿಯವರು ತಮ್ಮ ಪಕ್ಷದ ಅಧ್ಯಕ್ಷ ಸ್ಥಾನವನ್ನು ಮಹಿಳೆಗೆ ನೀಡಿದ್ದಾರೆಯೇ, ಆರ್ಎಸ್ಎಸ್ನಲ್ಲಿ ಮಹಿಳೆಯರ ನಾಯಕತ್ವಕ್ಕೆ ಅವಕಾಶ ನೀಡ ಲಾಗಿದೆ ಯೇ’ ಎಂದು ಅವರು ಪ್ರಶ್ನಿಸಿದರು.

‘ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳನ್ನು ಖಾಸಗಿ ತೆಕ್ಕೆಗೆ ನೀಡಲಾ ಗುತ್ತಿದೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಖಾಸಗಿ ಆಸ್ಪತ್ರೆ ಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಒದಗಿಲು ಈ ಹಿಂದೆಯೂ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಆಸ್ಪತ್ರೆಯನ್ನು ಸರ್ಕಾರ ಮಾರಾಟ ಮಾಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪಕ್ಷದ ಮುಖಂಡ ರಾದ ಅಪ್ಪಿ, ಹರಿನಾಥ್, ಶುಭೋದಯ ಆಳ್ವ, ಪಿಯೂಷ್ ರಾಡ್ರಿಗಸ್, ಬೇಬಿ ಕುಂದರ್, ಯೋಗೀಶ್, ಮೀನಾ ಟೆಲ್ಲಿಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-29-1104851313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.