ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಹಿಂಸೆಗೆ ಕೇಂದ್ರ–ರಾಜ್ಯದ ವೈಫಲ್ಯವೇ ಕಾರಣ: ಬಿ.ಕೆ. ಚಂದ್ರಶೇಖರ್‌

Published 22 ಜುಲೈ 2023, 23:30 IST
Last Updated 22 ಜುಲೈ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮಣಿಪುರದಲ್ಲಿ ಎರಡು ಬುಡಕಟ್ಟುಗಳ ಮಧ್ಯೆ ನಡೆಯುತ್ತಿರುವ ಸಂಘರ್ಷ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಚರ್ಚೆಯಾಗುತ್ತಿದೆ. ಅಲ್ಲಿ ನಡೆದ ಬೆತ್ತಲೆ ಮೆರವಣಿಗೆ, ಅತ್ಯಾಚಾರ, ಕೊಲೆ ಘಟನೆಗಳಿಗೆ ಯುರೋಪಿನ ಸಂಸತ್ತು ತೀವ್ರ ಕಳವಳ ವ್ಯಕ್ತಪಡಿಸಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ವೈಫಲ್ಯಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಚಂದ್ರಶೇಖರ್‌ ಅಭಿಪ್ರಾಯಪಟ್ಟಿದ್ದಾರೆ.

‘ಮಣಿಪುರದ ಪರಿಸ್ಥಿತಿಯನ್ನು ಸರ್ಕಾರವೇ ನಿಭಾಯಿಸಬೇಕು ಅಥವಾ ನಿಮ್ಮಿಂದ ಆಗದಿದ್ದಲ್ಲಿ ನಾವೇ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಜುಲೈ 20ರಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ. ಮಹಿಳೆಯರನ್ನು ಹಿಂಸೆಯ ಸಾಧನವಾಗಿ ಬಳಸುವುದು ಒಪ್ಪುವಂಥದ್ದಲ್ಲ ಎಂದೂ ಕೋರ್ಟ್‌ ಹೇಳಿದೆ. ಸುಪ್ರೀಂ ಕೋರ್ಟ್‌ನ ಈ ಕಟ್ಟುನಿಟ್ಟಿನ ಸೂಚನೆಯನ್ನು ನಿರೀಕ್ಷಿಸಿದ್ದ ಪ್ರಧಾನಿ ಮೋದಿ, ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಕೆಲವು ನಿಮಿಷಗಳ ಮೊದಲಷ್ಟೇ ಮೌನ ಮುರಿದಿದ್ದಾರೆ. ಮಣಿಪುರದ ಹಿಂಸೆಯನ್ನು ತಡೆಯಲು ಗೃಹ ಸಚಿವ ಅಮಿತ್ ಶಾ ಯಾವುದೇ ಪ್ರಯತ್ನ ಮಾಡಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದೂ ಅವರು ಆರೋಪಿಸಿದ್ದಾರೆ.

‘ಮಣಿಪುರದಲ್ಲಿರುವಂಥ ದಾರುಣ ಸ್ಥಿತಿಯನ್ನು ಕೇರಳ ಕೂಡಾ ಎದುರಿಸಬಹುದು ಎಂಬ ಭಯವನ್ನು ಕೋಯಿಕ್ಕೋಡ್‌ನ ಬಿಷಪ್ ಅವರು ಬಹಿರಂಗವಾಗಿಯೇ ಹೇಳಿರುವುದರಲ್ಲಿ ಆಶ್ಚರ್ಯ ಇಲ್ಲ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT