ರಾಯಚೂರು: ಆಂಧ್ರಪ್ರದೇಶದ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆ ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.
.ರಾಯಚೂರು | 43 ಡಿಗ್ರಿ ಸೆಲ್ಸಿಯಸ್ ತಾಪಮಾನ: ಹೈರಾಣದ ಜನ.
ಮೃತರನ್ನು ಚಿಕ್ಕಮಗಳೂರು ಭಾಗದ ಕಣನಾಯಕನಹಳ್ಳಿಯ ಕುಮಾರ (50), ದೀಪಿಕಾ (40), ಬೆಳ್ಳಿ (5), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನೀಲ್ (40), ಯಶೋದಾ (60), ಲೋಲಾಕ್ಷಿ, ಉದ್ದೇವ ಗ್ರಾಮದ ಪುಟ್ಟಮ್ಮ (55) ಹಾಗೂ ಮೀನಾಕ್ಷಿ ಎಂದು ಗುರುತಿಸಲಾಗಿದೆ.

9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕರ್ನೂಲ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಪಿಕ್ಅಪ್ ವಾಹನದಲ್ಲಿ 21 ಭಕ್ತರು ಮಂತ್ರಾಲಯದ ಗುರುರಾಯರ ದರ್ಶನಕ್ಕೆ ಬರುತ್ತಿದ್ದರು. ಹಾರುಬೂದಿ ಸಾಗಿಸುತ್ತಿದ್ದ ಟ್ಯಾಂಕರ್ ಮತ್ತು ಪಿಕ್ಅಪ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮಂತ್ರಾಲಯ ಠಾಣೆಯ ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.
. ರಾಯಚೂರು|ತೆವಳುತ್ತ ಸಾಗಿರುವ ಡ್ಯಾಡಿ ಕಾಲೊನಿ ರಸ್ತೆ ಕಾಮಗಾರಿ: ಜನರಿಗೆ ಕಿರಿಕಿರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.