ಮಾನ್ವಿ:‘ಸಚಿವ ಎನ್.ಎಸ್.ಬೋಸರಾಜು ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಜಾವೀದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್ ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವ ಎನ್.ಎಸ್.ಬೋಸರಾಜು ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಪ್ರಾಮಾಣಿಕತೆ, ಪರಿಶ್ರಮ ಎಲ್ಲರಿಗೂ ತಿಳಿದಿದೆ. ಅವರ ವಿರುದ್ಧ ಸುಳ್ಳು ಆರೋಪ ಮಾಡುವುದು ಸರಿಯಲ್ಲ’ ಎಂದರು.

‘ಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ಸಂಪೂರ್ಣ ಭರ್ತಿಯಾಗಿದೆ. ಪಟ್ಟಣದಲ್ಲಿ ಅಮೃತ-2 ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆದಿರುವ ಕಾರಣ ಕೆಲ ವಾರ್ಡ್ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಲ್ಲಿ ಸಮಸ್ಯೆಯಾಗುತ್ತಿದೆ. ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆದಿರುವ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವುದರಿಂದ ನೀರು ಪೂರೈಕೆಗೆ ಅಡ್ಡಿಯಾಗಿದೆ. ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡ ನಂತರ ಎಲ್ಲಾ ವಾರ್ಡ್ಗಳಿಗೆ ಪ್ರತಿದಿನ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗಲಿದೆ. ಅಲ್ಲಿಯವರೆಗೆ ಸಾರ್ವಜನಿಕರ ಸಹಕಾರ ಅಗತ್ಯ’ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಮುಖಂಡರಾದ ಹಿದಾಯತ್ ನಾಯ್ಕ್ , ಶೇಖ್ ಸತ್ತರ್ ಬಂಗ್ಲೆವಾಲೆ, ನಯೋಪ್ರಾ ಸದಸ್ಯ ಕನಕಪ್ಪ ಯಾದವ, ಪುರಸಭೆಯ ನಾಮನಿರ್ದೇಶನ ಸದಸ್ಯರಾದ ಹಂಪಯ್ಯ ನಾಯಕ ಹಾಗೂ ಕಾಮೇಶ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-301068570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.