ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಯತ್ನದ ವಿರುದ್ಧ ಲಿಂಗಾಯತ ಮಹಾಸಭಾ ಕೈಗೊಂಡಿರುವ ನಿರ್ಣಯಕ್ಕೆ ರಾಜ್ಯದ ನಾಲ್ವರು ಸಚಿವರೂ ಸೇರಿದಂತೆ ಕಾಂಗ್ರೆಸ್ನ ಹಲವು ಶಾಸಕರು, ಸಂಸದರು ಬೆಂಬಲ ಸೂಚಿಸಿದ್ದಾರೆ.

ಜಾತಿವಾರು ಜನಗಣತಿ ವರದಿ ಅಂಗೀಕಾರ ವಿರೋಧಿಸಿ ಅಖಿಲ ಭಾರತ ವೀರಶೈವ/ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಸಮುದಾಯದ ರಾಜಕೀಯ ಮುಖಂಡರು ಮತ್ತು ವಿವಿಧ ಸಂಘಟನೆಗಳ ಪ್ರಮುಖರ ಸಭೆ ನಗರದಲ್ಲಿ ನಡೆಯಿತು. ಜಾತಿವಾರು ಜನಗಣತಿ ವರದಿ ಸ್ವೀಕರಿಸದಂತೆ ಆಗ್ರಹಿಸುವುದೂ ಸೇರಿದಂತೆ ಐದು ನಿರ್ಣಯಗಳನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಮಹಾಸಭಾ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸದಸ್ಯರಾಗಿರುವ ಎಂ.ಬಿ. ಪಾಟೀಲ, ಈಶ್ವರ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಮುಖ್ಯಮಂತ್ರಿಯವರ ಸಲಹೆಗಾರ ಬಿ.ಆರ್. ಪಾಟೀಲ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಶಾಸಕರಾದ ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಹಂಪನಗೌಡ ಬಾದರ್ಲಿ, ಸಿ.ಎಸ್. ನಾಡಗೌಡ, ಸಂಸದ ಸಾಗರ್ ಖಂಡ್ರೆ, ಮುಖಂಡ ಅಲ್ಲಂ ವೀರಭದ್ರಪ್ಪ, ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಸೇರಿದಂತೆ ಹಲವರು ಸಭೆಯಲ್ಲಿದ್ದರು. ಸುದೀರ್ಘ ಚರ್ಚೆಯ ಬಳಿಕ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.

ಮಹಾಸಭಾ ನಿರ್ಣಯಗಳೇನು?

*ಹತ್ತು ವರ್ಷಗಳ ಹಿಂದೆ ನಡೆಸಲಾದ ಸಮೀಕ್ಷೆಯ ವರದಿಯು ಹಲವು ವೈರುಧ್ಯ ಮತ್ತು ಲೋಪಗಳಿಂದ ಕೂಡಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು

*ಕಾಂತರಾಜ ನೇತೃತ್ವದ ಆಯೋಗವು ನಡೆಸಿದ ಸಮೀಕ್ಷೆಯ ವರದಿಯನ್ನು ಆಧರಿಸಿ ಈಗ ಹಿಂದುಳಿದ ವರ್ಗಗಳ ಆಯೋಗವು ಶಿಫಾರಸುಗಳನ್ನು ಸಲ್ಲಿಸಿದೆ. ಇದು ಅವೈಜ್ಞಾನಿಕ ಮತ್ತು ಅಸಾಂವಿಧಾನಿಕ ವರದಿಯಾಗಿದ್ದು ಸ್ವೀಕಾರಾರ್ಹವಲ್ಲ. ಆದ್ದರಿಂದ ವರದಿಗೆ ಸಂಬಂಧಿಸಿದಂತೆ ಉದ್ದೇಶಿತ ಪ್ರಕ್ರಿಯೆಯನ್ನು ಮುಖ್ಯಮಂತ್ರಿಯವರು ಕೈಬಿಡಬೇಕು

*ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಲಿಂಗಾಯತ ಉಪ ಜಾತಿಗಳ ಹೆಸರನ್ನು ಮಾತ್ರ ನಮೂದಿಸಲಾಗುತ್ತದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಆಧಾರದಲ್ಲಿ ಎಲ್ಲ ಲಿಂಗಾಯತ ಉಪ ಪಂಗಡಗಳನ್ನು ‘ಲಿಂಗಾಯತ’ ಎಂದು ನಮೂದಿಸಲು ಅವಕಾಶ ನೀಡಬೇಕು. ಈಗ ವಿವಿಧ ಪ್ರವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳನ್ನು ಬದಲಾಯಿಸದೇ ಜಾತಿ ಹೆಸರನ್ನು ನಮೂದಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಬೇಕು

*ವೀರಶೈವ–ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ(ಒಬಿಸಿ) ಪಟ್ಟಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಯವರು ಶಿಫಾರಸು ಮಾಡಬೇಕು

*ಸಾಮಾಜಿಕ ಅಸಮಾನತೆಯ ನಿರ್ಮೂಲನೆ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಎಲ್ಲ ಸೈದ್ಧಾಂತಿಕ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ. ನಾವು ಜಾತಿ ಗಣತಿಯ ವಿರೋಧಿಗಳಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.