ಬೆಂಗಳೂರು ಪ್ರಧಾನ ಪೀಠದಲ್ಲಿನ 17ನೇ ಕೋರ್ಟ್ ಹಾಲ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರದ (ಸೆ.17) ಕಲಾಪದಲ್ಲಿ ಪಟ್ಟಿ ಮಾಡಲಾಗಿದ್ದ ಒಟ್ಟು 503 ಕ್ರಿಮಿನಲ್ ಹಾಗೂ ರಿಟ್ ಅರ್ಜಿಗಳನ್ನು ದಿನದ ಕಲಾಪದ ಅವಧಿ ಪೂರ್ಣಗೊಳ್ಳುವುದಕ್ಕೂ 45 ನಿಮಿಷಗಳ ಮುಂಚಿತವಾಗಿ ಮುಕ್ತಾಯಗೊಳಿಸಿದರು. ಇವುಗಳಲ್ಲಿ 187 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, 125 ಪ್ರಕರಣಗಳಲ್ಲಿ ಮಧ್ಯಂತರ ಆದೇಶ ನೀಡಲಾಗಿದೆ.