ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವು ನ್ಯಾಯಾಧೀಶರ ವರ್ಗಾವಣೆ

Published 25 ಏಪ್ರಿಲ್ 2024, 16:04 IST
Last Updated 25 ಏಪ್ರಿಲ್ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ 138 ಸಿವಿಲ್, 166 ಹಿರಿಯ ಸಿವಿಲ್, 6 ಜಿಲ್ಲಾ ಮತ್ತು ಹಿರಿಯ ಸಿವಿಲ್, 112 ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. 

ಈ ಕುರಿತ ಅಧಿಸೂಚನೆಯನ್ನು ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌.ಭರತ್‌ ಕುಮಾರ್ ಗುರುವಾರ ಬಿಡುಗಡೆ ಮಾಡಿದ್ದಾರೆ. ಅಧಿಸೂಚನೆಯ ಅನುಸಾರ 62 ಸಿವಿಲ್ ನ್ಯಾಯಾಧೀಶರಿಗೆ ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ನೀಡಲಾಗಿದೆ.

14 ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಹಂಗಾಮಿ ಜಿಲ್ಲಾ ನ್ಯಾಯಾಧೀಶರನ್ನಾಗಿ ನಿಯೋಜಿಸಲಾಗಿದೆ.  ವರ್ಗಾವಣೆ ಆದೇಶ ಮೇ 27 ರಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT