ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನ ತೋಟದ ಮನೆಯಲ್ಲಿ ಬೀಡುಬಿಟ್ಟಿದ್ದಾರೆ.

ಶನಿವಾರವೇ ಇಲ್ಲಿಗೆ ಬಂದಿರುವ ಅವರು ಎಚ್.ಡಿ.ಕೋಟಿ ರಸ್ತೆಯ ಟಿ.ಕಾಟೂರಿನ ಬಳಿ ಇರುವ ತಮ್ಮ ಫಾರಂನಲ್ಲಿ ಪುತ್ರ ಡಾ.ಯತೀಂದ್ರ ಜೊತೆ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

‘ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅದು ಸುಳ್ಳು. ವಿಶ್ರಾಂತಿಗಾಗಿ ಬಂದಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಶಾಸಕ ಡಾ.ಯತೀಂದ್ರ ಅವರು ವಿವಿಧೆಡೆ ಅಧಿಕಾರಿಗಳ ಸಭೆ ಕೂಡ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ಅಥವಾ ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ, ಶಾಸಕರು ಹಾಗೂ ಇತರರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.