ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾರೂಪ ಪಡೆದ ಮರಾಠಿ ಮೀಸಲಾತಿ ಹೋರಾಟ: ಆರು ಬಸ್ಸುಗಳಿಗೆ ಬೆಂಕಿ, 85 ಮಂದಿಗೆ ಗಾಯ

Published 1 ಸೆಪ್ಟೆಂಬರ್ 2023, 17:45 IST
Last Updated 1 ಸೆಪ್ಟೆಂಬರ್ 2023, 17:45 IST
ಅಕ್ಷರ ಗಾತ್ರ

ಬೆಳಗಾವಿ: 'ಮರಾಠಾ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡ ಅನಿರ್ದಿಷ್ಟಾವಧಿ ಹೋರಾಟ ಶುಕ್ರವಾರ ಹಿಂಸಾಚಾರ ರೂಪ ಪಡೆದಿದೆ. ಆರು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಲ್ಲಿ ಕರ್ನಾಟಕದ ಎರಡು ಬಸ್ಸುಗಳೂ ಸುಟ್ಟಿವೆ. ಅಂದಾಜು 85ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ವಿವಿಧೆಡೆ ಕೆಲವು ದಿನಗಳಿಂದ ಮರಾಠಾ ಮೀಸಲಾತಿಗಾಗಿ ಪ್ರತಿಭಟನೆಗಳು ನಡೆದಿವೆ. ಜಾಲನಾ ಜಿಲ್ಲೆಯ ಶಹಘಡ ಬಳಿ ನಡೆದ ಹೋರಾಟದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಉದ್ರಿಕ್ತ ಹೋರಾಟಗಾರರು ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದರು. ಇದನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಕೋಪಗೊಂಡ ಹೋರಾಟಗಾರರು ಹೆದ್ದಾರಿಯಲ್ಲಿ ಸಿಕ್ಕಸಿಕ್ಕ ಬಸ್ಸುಗಳಿಗೆ ಕಲ್ಲು ತೂರಿದರು. ಪ್ರಯಾಣಿಕರು ಬಸ್ಸಿನಲ್ಲಿ ಇದ್ದಾಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು. ನೋಡ ನೋಡುತ್ತಿದ್ದಂತೆ ಆರು ಬಸ್ಸುಗಳು ಧಗಧಗ ಉರಿದವು ಎಂದು ಅಲ್ಲಿನ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ಔರಾಂಗಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್‌ನಲ್ಲಿ 45 ಪ್ರಯಾಣಿಕರು ಇದ್ದರು. ಈ ಬಸ್ಸಿಗೂ ಬೆಂಕಿ ಹಚ್ಚಲಾಗಿದೆ ಎಂದು ಚಾಲಕ, ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಎಲ್.ಎಲ್. ಲಮಾಣಿ ತಿಳಿಸಿದ್ದಾರೆ.

ಘಟನೆಯಿಂದ ಮಹಾರಾಷ್ಟ್ರರ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT