ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ (ಕಲ್ಯಾಣ ಕರ್ನಾಟಕ) ಹಾಗೂ ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿನ ಖಾಲಿ ಹುದ್ದೆಗಳಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿರ್ವಾಹಕರ ಹುದ್ದೆಗಳು, ಒಳಚರಂಡಿ ಮಂಡಳಿಯ ಪ್ರಥಮ ದರ್ಜೆ ಸಹಾಯಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳಿಗೆ ಇದೇ ಜುಲೈ 13 ಮತ್ತು 14ರಂದು ಲಿಖಿತ ಪರೀಕ್ಷೆ ನಡೆದಿತ್ತು.