ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆಗೆ ಅಡ್ಡಿಯಾಗಿದ್ದ, ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ವಾಪಸ್ ಪಡೆದಿದ್ದಾರೆ.

ಇದರಿಂದ ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುವುದು ಸನ್ನಿಹಿತವಾಗಿದ್ದು, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾರ್ಗ ಸುಗಮವಾದಂತಾಗಿದೆ.

2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದರು. ‘ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕೆದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು’ಎಂದು ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗದ ಕಾರಣ ಈ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿರಲಿಲ್ಲ. ಬಿಜೆಪಿಯಿಂದ ಸ್ಪರ್ಧಿಸಲು ಪ್ರತಾಪಗೌಡ ಅವರ ಹಾದಿ ಸುಗಮ ಮಾಡಿಕೊಡಲು ಬಸನಗೌಡ ಅವರನ್ನು ರಾಜ್ಯ ಸರ್ಕಾರ ತುಂಗಭದ್ರಾ ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿತ್ತು. ವಿಳಂಬವಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಈಚೆಗಷ್ಟೇ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯ ಫಲಿತಾಂಶದ ನಂತರ ಮನಸ್ಸು ಬದಲಿಸಿದ್ದಾರೆ.

‘ಪಕ್ಷದ ವರಿಷ್ಠರ ಸೂಚನೆಯಂತೆ ತಕರಾರು ಅರ್ಜಿ ವಾಪಸ್ ಪಡೆದಿದ್ದೇನೆ. ಯಾವುದೇ ಷರತ್ತು ವಿಧಿಸಿಲ್ಲ. ನನಗೆ ಪಕ್ಷದ ಹಿತ ಮುಖ್ಯ’ ಎಂದುಬಸನಗೌಡ ಪ್ರತಿಕ್ರಿಯಿಸಿದರು.

‘ಇದು ಒಳ್ಳೆಯ ಬೆಳವಣಿಗೆ. ಆದಷ್ಟು ಬೇಗ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗುವ ನಿರೀಕ್ಷೆ ಇದೆ’ ಎಂದು ಅನರ್ಹ ಶಾಸಕಪ್ರತಾಪಗೌಡ ಪಾಟೀಲ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.