ಮಸ್ಕಿ: ‘ಬಿಜೆಪಿಯಿಂದ ಯಾರೇ ಸ್ಪರ್ಧಿಸಲಿ ಅದು ಆ ಪಕ್ಷದ ಆಂತರಿಕ ವಿಚಾರ, ಅದಕ್ಕೂ ಕಾಂಗ್ರೆಸ್ಗೂ ಸಂಬಂಧ ಇಲ್ಲ’ ಎಂದು ಕಾಂಗ್ರೆಸ್ ನಗರ ಬ್ಲಾಕ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಹೇಳಿದ್ದಾರೆ.

ಪಟ್ಟಣದಲ್ಲಿ ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಕಾಂಗ್ರೆಸ್ನ ಅಸಮಾಧಾನಿತ ಗುಂಪು ರಾಮುಲು ಅವರನ್ನು ಭೇಟಿಯಾಗಿದೆ ಎಂದು ಹೇಳುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಖಂಡಿಸುತ್ತದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ನ ಕೆಲವರು ರಾಮುಲು ಅವರ ಮೇಲಿನ ಅಭಿಮಾನದಿಂದಲೊ ಅಥವಾ ಸಮುದಾಯದ ನಾಯಕ ಅಂತಾ ಭೇಟಿ ಆಗಿರಬಹುದು ಎಂದು ಹೇಳಿದ್ದಾರೆ. ಇದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಕ್ಷೆತ್ರದ ಅಭಿವೃದ್ಧಿ ಕಡೆ ಮಾತ್ರ ನಮ್ಮ ಗಮನ, ಕ್ಷೇತ್ರದ ರೈತರಿಗೆ ಕೊಟ್ಟ ಮಾತಿನಂತೆ 5ಎ ಕಾಲುವೆ ಯೋಜನೆ ಜಾರಿಗೆ ತಂದು ಈಗ ಟೆಂಡರ್ ಕರೆಯಲಾಗಿದೆ. ಪಟ್ಟಣದ ಸೋಮನಾಥನಗರ ನಿವಾಸಿಗಳು ಕಳೆದ 35 ವರ್ಷಗಳಿಂದ ಹಕ್ಕು ಪತ್ರಗಳಿಗಾಗಿ ಅಲೆದಾಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ಬಡಜನರ ನೆರವಿಗೆ ಭಾವಿಸಿದ್ದು ಇದೀಗ ಅವರಿಗೆ ಹಕ್ಕು ಪತ್ರ ವಿತರಿಸಲು ಶಾಸಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಶೀಘ್ರದಲ್ಲೇ ಅವರಿಗೆ ಹಕ್ಕುಪತ್ರಗಳನ್ನು ಸಹ ವಿತರಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.