ಮಸ್ಕಿ: ‘ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ಸಂಚಾರದಿಂದ ಉಂಟಾಗಿರುವ ಬಿಜೆಪಿಯಲ್ಲಿನ ಗೊಂದಲಕ್ಕೂ ಹಾಗೂ ಕಾಂಗ್ರೆಸ್ಗೂ ಯಾವುದೇ ಸಂಬಂಧ ಇಲ್ಲ’ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಚೆಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಕಾಂಗ್ರೆಸ್ನ ಅಸಮಾಧಾನಿತರ ಗುಂಪು ರಾಮುಲು ಅವರನ್ನು ಭೇಟಿಯಾಗಿದೆ. ಅವರೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಕಾಂಗ್ರೆಸ್ನಲ್ಲಿ ಕೆಲವರು ರಾಮುಲು ಅವರ ಮೇಲಿನ ಅಭಿಮಾನದಿಂದಲೋ ಅಥವಾ ಸಮುದಾಯದ ನಾಯಕ ಎಂದೋ ಭೇಟಿ ಆಗಿರಬಹುದು ಎಂದು ಹೇಳಿದ್ದಾರೆ. ಇದಕ್ಕೂ, ಕಾಂಗ್ರೆಸ್ಗೂ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾಗಲಿ ಅದು ಅವರ ಆಂತರಿಕ ವಿಚಾರ. ನಮ್ಮ ಪಕ್ಷ ಹಾಗೂ ನಮ್ಮ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಗಮನ ಕೊಟ್ಟಿದ್ದಾರೆ. ರೈತರಿಗೆ ಕೊಟ್ಟ ಮಾತಿನಂತೆ ನಾರಾಯಣಪುರ ಬಲದಂಡೆಯ 5 (ಎ) ಕಾಲುವೆ ಯೋಜನೆ ಜಾರಿಗೆ ತಂದು ಈಗ ಟೆಂಡರ್ ಕರೆಯಲಾಗಿದೆ. ಪಟ್ಟಣದ ಸೋಮನಾಥನಗರದ ನಿವಾಸಿಗಳಿಗೆ ಶೀಘ್ರ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-32-1906513252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.