ಬೆಂಗಳೂರು: ಕಾವೇರಿ ಕಣಿವೆ ವ್ಯಾಪ್ತಿಯ ಜಲಾಶಯಗಳ ವಾಸ್ತವಾಂಶ ಪರಿಶೀಲನೆಗೆ ಪರಿಣತರ ತಂಡ ಕಳುಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು. ಪರಿಣತರ ತಂಡ ಪರಿಶೀಲಿಸಿದ ನಂತರ ನೀಡುವ ವರದಿ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಸ್ಥಿತಿಯನ್ನು ಪ್ರಧಾನಿ ಮೋದಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.