ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜ್ಞಾನ, ಆರೋಗ್ಯ ನಗರಕ್ಕೆ ಸೆ. 26ರಂದು ಚಾಲನೆ

Published : 25 ಸೆಪ್ಟೆಂಬರ್ 2024, 16:25 IST
Last Updated : 25 ಸೆಪ್ಟೆಂಬರ್ 2024, 16:25 IST
ಫಾಲೋ ಮಾಡಿ
Comments

ಬೆಂಗಳೂರು: ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ (ಕೆಎಚ್ಐಆರ್‌ ಸಿಟಿ) ಮೊದಲ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರೂ ಭಾಗವಹಿಸಲಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

‘ದಾಬಸ್‌ಪೇಟೆ-ದೊಡ್ಡಬಳ್ಳಾಪುರ ನಡುವೆ ಸ್ಯಾಟಲೈಟ್‌ ಟೌನ್‌ ವರ್ತುಲ ರಸ್ತೆಗೆ ಹೊಂದಿಕೊಂಡಿರುವ, 500 ಎಕರೆಯಲ್ಲಿ ಮೊದಲ ಹಂತದ ವಿನೂತನ ನಗರ ಅಸ್ತಿತ್ವಕ್ಕೆ ಬರಲಿದೆ. ಇದನ್ನು ಕ್ರಮೇಣ ಐದು ಸಾವಿರ ಎಕರೆಯವರೆಗೂ ವಿಸ್ತರಿಸಲಾಗುವುದು’ ಎಂದಿದ್ದಾರೆ.

‘ಇಲ್ಲಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯಕ್ಕೆ ಒತ್ತು ಕೊಡಲಾಗುವುದು. ಜಾಗತಿಕವಾಗಿ ಹೆಸರು ಮಾಡಿರುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ, ವೈದ್ಯಕೀಯ ಸಂಸ್ಥೆಗಳು ಮತ್ತು ಆರೋಗ್ಯ ಸೇವೆಗಳ ಸಂಸ್ಥೆಗಳು ನೆಲೆಯೂರಲಿವೆ. ಅದಕ್ಕಾಗಿ ₹40 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT