ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಅವರು ಉತ್ತಮ ಸಂಘಟಕರಾಗಿದ್ದು, ಅವರಿಗೆ ನಾಯಕತ್ವ ವಹಿಸುವ ಸಾಮರ್ಥ್ಯವಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜಾರಕಿಹೊಳಿ ಸೇರಿದಂತೆ ಎಲ್ಲರಿಗೂ ಹೈಕಮಾಂಡ್ ನಾಯಕರ ಬಳಿ ಚರ್ಚಿಸಲು ಅಧಿಕಾರ ಇದೆ’ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಲಿತ ಮುಖ್ಯಮಂತ್ರಿ ಕೂಗಿಗೆ ಹೈಕಮಾಂಡ್ ಉತ್ತರ ನೀಡಲಿದೆ. ಲಿಂಗಾಯತ ಸಮುದಾಯ ಕೂಡಾ ಬೇಡಿಕೆ ಇಡಬಹುದು. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದೆ’ ಎಂದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಕ್ಕೆ ಬಂದಾಗ ನಾನು ಅವರನ್ನು ಭೇಟಿಯಾಗುತ್ತೇನೆ. ನನ್ನ ಆಸಕ್ತಿಯನ್ನು ಹೈಕಮಾಂಡ್ಗೆ ಹೇಳುತ್ತೇನೆ, ಬಹಿರಂಗವಾಗಿ ಹೇಳುವುದಿಲ್ಲ’ ಎಂದರು.

‘ಸದ್ಯದ ರಾಜಕೀಯ ಬೆಳವಣಿಗೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತಿದೆ’ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ, ‘ಒಂದು ಮನೆ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳು ಇರುತ್ತದೆ. ನಮ್ಮ ಹೈಕಮಾಂಡ್ ತುಂಬಾ ಗಟ್ಟಿಯಾಗಿದೆ. ಏನೇ ಗೊಂದಲಗಳಿದ್ದರೂ ಎಲ್ಲವನ್ನೂ ಬಗೆಹರಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.