ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರಿಗೆ ಉದ್ಯೋಗ ನೀಡದ ಕಂಪನಿಗಳ ವಿರುದ್ಧ ಕ್ರಮ: ಎಂ.ಬಿ.ಪಾಟೀಲ

Published 13 ಫೆಬ್ರುವರಿ 2024, 16:16 IST
Last Updated 13 ಫೆಬ್ರುವರಿ 2024, 16:16 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದಿಂದ ರಿಯಾಯಿತಿ ಪಡೆದುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೇ ಇದ್ದರೆ ಅಂತಹ ಉದ್ಯಮಗಳು ಅಥವಾ ಕಂಪನಿಗಳಿಂದ ರಿಯಾಯ್ತಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಧಾನಸಭೆಯಲ್ಲಿ ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಈ ವಿಷಯ ತಿಳಿಸಿದರು.

ಹಲವು ಉದ್ಯಮಗಳಿಗೆ ರಿಯಾಯಿತಿ ದರದಲ್ಲಿ ಭೂಮಿ, ನೀರು, ವಿದ್ಯುತ್‌ ನೀಡಲಾಗಿದೆ. ಈ ರೀತಿ ರಿಯಾಯಿತಿ ಪಡೆದವರು ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ. ಯಾವುದೇ ರಿಯಾಯಿತಿ ಪಡೆಯದ ಉದ್ಯಮಗಳಿಗೆ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ನಿಯಮ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯ ಅರವಿಂದ ಬೆಲ್ಲದ ಮಾತನಾಡಿ, ‘ಇನ್ಫೊಸಿಸ್‌ ಉದ್ಯಮ ಸ್ಥಾಪಿಸುವುದಾಗಿ ಹುಬ್ಬಳ್ಳಿಯಲ್ಲಿ ಸರ್ಕಾರದಿಂದ ಜಮೀನು ಪಡೆಯಿತು. ಆದರೆ, ಅಲ್ಲಿ ಉದ್ಯಮ ಸ್ಥಾಪಿಸದೇ ಮರಗಳನ್ನು ಬೆಳೆಸಿದೆ. ಭೂಮಿ ಬಿಟ್ಟುಕೊಟ್ಟವರು ತಮಗೆ ಉದ್ಯೋಗ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅವರು ನಮ್ಮ ಬಳಿ ನಿರೀಕ್ಷೆಯಿಂದ ಬಂದು ವಿಚಾರಿಸುತ್ತಾರೆ’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ, ನಿರ್ದಿಷ್ಟ ಪ್ರಕರಣಗಳಿದ್ದರೆ, ತಿಳಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. 

ನಿಯಮ ಉಲ್ಲಂಘಿಸುವ ಉದ್ಯಮಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವೇ ದಂಡವನ್ನಾದರೂ ವಿಧಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT