ದಾವಣಗೆರೆ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ನೆನೆದು ಮಾಜಿ ಸಚಿವ ಎಂ.ಸಿ.ಸುಧಾಕರ್ ಭಾವುಕರಾದರು.

‘ಸಿದ್ದಾರಾಮಯ್ಯ ಅವರು ಎಲ್ಲ ವರ್ಗಕ್ಕೆ ಸಮಾನತೆ ಕಲ್ಪಿಸಿದ ನಾಯಕ. ಮೂರು ದಿನಗಳಿಂದ ಅವರನ್ನು ನೋಡಲು ಆಗುತ್ತಿಲ. ಅಂತಹ ನಾಯಕ ಸಿಗುವುದು ಅಪರೂಪ' ಎಂದು ಹೇಳಿದರು.

‘ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಉನ್ನತ ನಾಯಕರ ವ್ಯಕ್ತಿತ್ವ ಹೇಗಿರುತ್ತದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ವರ್ಚಸ್ಸು ಇನ್ನಷ್ಟು ಹೆಚ್ಚಾಗಿದೆ. ಎಲ್ಲರೂ ಒಗ್ಗೂಡಿ ಪಕ್ಷಕ್ಕೆ ದುಡಿಯುತ್ತೇವೆ’ ಎಂದು ಸುದ್ದಿಗಾರರಿಗೆ ಹೇಳಿದರು.

‘ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿಯ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಅವರು ಕಣ್ಣೀರು ಹಾಕಿಕೊಂಡು ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಎಂದಿಗೂ ಹೀಗೆ ನಡೆಸಿಕೊಂಡಿಲ್ಲ. ರಾಹುಲ್ ಗಾಂಧಿ ಅವರ ಮಾತಿಗೆ ಬೆಲೆಕೊಟ್ಟು ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.