ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಇದುವರೆಗೂ ಅರ್ಜಿ ಸಲ್ಲಿಸದೆ ಇರುವ ನೀಟ್ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.
ರಾಜ್ಯ ಮತ್ತು ಹೊರ ರಾಜ್ಯದ ಅರ್ಹ ಅಭ್ಯರ್ಥಿಗಳು ಆ.9 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಕೆಇಎ ವೆಬ್ ಪೋರ್ಟಲ್‌ನಲ್ಲಿ, ಯುಜಿನೀಟ್-24ಕ್ಕೆ ಹೊಸದಾಗಿ ನೋಂದಣಿ ಮಾಡುವ ಲಿಂಕ್ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕ ಪಾವತಿಸಬೇಕು ಎಂದು ಕೆಇಎ ಹೇಳಿದೆ.
ವಿವಿಧ ಕೋಟಾಕ್ಕಾಗಿ ಬೇಡಿಕೆ ಸಲ್ಲಿಸಿ, ನಿಗದಿತ ದಿನಾಂಕದಂದು ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇದ್ದವರು ಆ. 9ರವರೆಗೆ ಕೆಇಎ ಕಚೇರಿಗೆ ದಾಖಲೆಗಳ ಪರಿಶೀಲನೆ ಹಾಜರಾಗಬಹುದು.