ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರು, ತಮ್ಮ ಆಯ್ಕೆಗಳನ್ನು ದಾಖಲಿಸಲು ಫೆ.16ರಿಂದ 17ರ ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ.

ಫೆ.17ರವರೆಗೆ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಆದೇಶ ನೀಡಿದ ಕಾರಣ ಈ ತೀರ್ಮಾನ ಮಾಡಲಾಗಿದೆ. ಇದುವರೆಗೂ ಆಯ್ಕೆಗಳನ್ನು ದಾಖಲಿಸದೇ ಇರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿದ್ದಾರೆ.

ಸೇವಾ ನಿರತರಿಗೆ ಅವಕಾಶ:

ವೈದ್ಯಕೀಯ ಸ್ನಾತಕೋತ್ತರ ಪದವಿಗೆ 3ನೇ ಸುತ್ತಿನಲ್ಲಿ ಪ್ರವೇಶ ಬಯಸುವ ಸೇವಾ ನಿರತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಫೆ.12ರಿಂದ 14ರವರೆಗೆ ಅವಕಾಶ ನೀಡಲಾಗಿದೆ. ಅರ್ಹತಾ ಅಂಕಗಳನ್ನು ಕಡಿಮೆ ಮಾಡಿರುವ ಕಾರಣಕ್ಕೆ ಹೊಸದಾಗಿ ಇದುವರೆಗೂ ಅರ್ಜಿ ಸಲ್ಲಿಸದೆ ಇರುವ ಅರ್ಹರು ಅರ್ಜಿ ಸಲ್ಲಿಸಬಹುದು. ಮೂಲ ದಾಖಲೆಗಳ ಪರಿಶೀಲನೆಗೆ ಫೆ.16ರಂದು ಕೆಇಎ ಕಚೇರಿಯಲ್ಲಿ ಹಾಜರಾಗಬೇಕು. ಬಳಿಕ ಅರ್ಹರಾದವರಿಗೆ ಫೆ.17ರಂದು ಬೆಳಿಗ್ಗೆ 11ರವರೆಗೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.