ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯಕೀಯ ಸೀಟು ವಿವಾದ: ಏಕಸದಸ್ಯ ಪೀಠದ ಆದೇಶಕ್ಕೆ ತಡೆ

Published : 20 ಆಗಸ್ಟ್ 2024, 23:13 IST
Last Updated : 20 ಆಗಸ್ಟ್ 2024, 23:13 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯದ 17 ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ಮ್ಯಾನೇಜ್‌ಮೆಂಟ್ ಮತ್ತು ಎನ್‌ಆರ್‌ಐ ಕೋಟಾದ 212 ಸೀಟುಗಳನ್ನು ಸರ್ಕಾರಿ ಕೋಟಾಕ್ಕೆ ಒಪ್ಪಿಸಬೇಕು’ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಬೆಂಗಳೂರಿನ ವೈದೇಹಿ ವೈದ್ಯಕೀಯ ವಿಜ್ಞಾನಗಳು ಮತ್ತು ಸಂಶೋಧನಾ ಸಂಸ್ಥೆ ಸೇರಿದಂತೆ ಹಲವು ವೈದ್ಯಕೀಯ ಕಾಲೇಜುಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ‘ಈ ಮಧ್ಯಂತರ ಆದೇಶವು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುತ್ತದೆ’ ಎಂದು ಸ್ಪಷ್ಟಪಡಿಸಿದೆ.

ಪ್ರಕರಣವೇನು?: ‘ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗಗಳ (ಎನ್‌ಎಂಸಿ) ನಿಯಮಗಳನ್ನು ಉಲ್ಲಂಘಿಸಿ ಕಡಿಮೆ ಶ್ರೇಯಾಂಕದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗಿದೆ’ ಎಂಬ ಆರೋಪದಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು. ‘ನಿಯಮ ಬಾಹಿರವಾಗಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಂಡ ಆರೋಪ ಎದುರಿಸುತ್ತಿರುವ 17 ಕಾಲೇಜುಗಳು; ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ತಮ್ಮ ಮ್ಯಾನೇಜ್‌ಮೆಂಟ್ ಹಾಗೂ ಎನ್‌ಆರ್‌ಐ ಕೋಟಾದಿಂದ 212 ವೈದ್ಯಕೀಯ ಸೀಟುಗಳನ್ನು ಸರ್ಕಾರಿ ಕೋಟಾಕ್ಕೆ ಒಪ್ಪಿಸಬೇಕು’ ಎಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT