ಬೆಂಗಳೂರು: ಮೇಕೆದಾಟು ಅಣೆಕಟ್ಟೆಯೋಜನೆ ರೂಪಿಸಲು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಗಿರಲಿಲ್ಲ. ನನ್ನ ಸರ್ಕಾರ ಅದನ್ನು ಜಾರಿಗೆ ತಂದು ಧೈರ್ಯ ತೋರಿತು. ಆದರೆ, ಅದನ್ನು ಉಳಿಸಿಕೊಳ್ಳಲೂ ಬಿಜೆಪಿಗೆ ಆಗುತ್ತಿಲ್ಲ. ರಾಜ್ಯ–ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಯೋಜನೆ ಅನಿಶ್ಚಿತತೆ ಎದುರಿಸುತ್ತಿದೆ. ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ)ಯ ಪ್ರಧಾನ ಪೀಠ ಮೇಕೆದಾಟು ಪ್ರಕರಣಕ್ಕೆ ಸಂಬಂಧಿಸಿ ತೀರ್ಪನ್ನು ಕಾಯ್ದಿರಿಸಿದ ಬೆನ್ನಲ್ಲೇ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಕುತೂಹಲ ಕೆರಳಿಸಿದೆ. ಮೇಕೆದಾಟು ಸ್ಥಳ ಪರಿಶೀಲನೆಗೆ ಸಮಿತಿ ರಚಿಸಿ ದಕ್ಷಿಣ (ಚೆನ್ನೈ) ಪೀಠ ನೀಡಿದ್ದ ಆದೇಶ ಪ್ರಶ್ನಿಸಿರುವ ಕರ್ನಾಟಕದ ಮೇಲ್ಮನವಿ ವಿಚಾರಣೆಯನ್ನು ಎನ್‌ಜಿಟಿ ಗುರುವಾರ ಪೂರ್ಣಗೊಳಿಸಿತ್ತು.

ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ–ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ. ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ. ಸರ್ಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲ–ಜಲ, ಭಾಷೆ–ನುಡಿಯ ಬಗ್ಗೆ ಅಕ್ಕರೆ ಇದ್ದೀತೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೇಕೆದಾಟು ತೀರ್ಪು ಕಾಯ್ದಿರಿಸಿದ ಎನ್‌ಜಿಟಿ

ರಾಜ್ಯದ ಅಸ್ಮಿತೆ ಕಾಪಡಲಾಗದ ರಾಷ್ಟ್ರೀಯ ಪಕ್ಷಗಳು:ರಾಜ್ಯದ ಜನ ಗಮನಿಸಬೇಕು. ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವುದು ಪ್ರಾದೇಶಿಕ ಪಕ್ಷ. ಪ್ರಾದೇಶಿಕತೆ, ಅಸ್ಮಿತೆ ವಿಚಾರದಲ್ಲಿ ತಮಿಳುನಾಡು ಪ್ರಬಲವಾಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳೇ ಹೆಚ್ಚು ಅಧಿಕಾರದಲ್ಲಿದ್ದರೂ ರಾಜ್ಯದ ಅಸ್ಮಿತೆ, ಪ್ರಾದೇಶಿಕತೆ ರಕ್ಷಣೆ ಸಾಧ್ಯವಾಗುತ್ತಿಲ್ಲ. ರಾಜ್ಯದ ಹಿತರಕ್ಷಣೆಗೆ ಪ್ರಾದೇಶಿಕ ಪಕ್ಷವೇ ಅಗತ್ಯ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಸ್ಟಾಲಿನ್ ಒಂದು ಮಾತು ಹೇಳಿದ್ದರು. ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಲಾಗಿರುವ ಎಲ್ಲ ಭಾಷೆಗಳಿಗೆ ಅಧಿಕೃತ ಭಾಷೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದರು. ಈ ಪ್ರಯತ್ನದಲ್ಲಿ ನಾನೂ ಕೈಜೋಡಿಸುತ್ತೇನೆ. ಆದರೆ, ಅಣ್ಣತಮ್ಮಂದಿರಂತೆ ಇರಬೇಕಾದ ನಾವು ಕಾವೇರಿ ವಿಚಾರದಲ್ಲಿ ಕಲಹಕ್ಕಿಳಿಯುವುದರಲ್ಲಿ ಲಾಭವಿಲ್ಲ.

ದಕ್ಷಿಣ ಭಾರತದ ರಾಜ್ಯಗಳು, ಭಾಷೆ, ಸಂಸ್ಕೃತಿ ವಿಚಾರದಲ್ಲಿ ಈಗಿನ ಕೇಂದ್ರ ಸರ್ಕಾರ ಅತ್ಯಂತ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಹೊತ್ತಿನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ವಿಚಾರದ ಮೂಲಕ ಒಡೆದುಹೋಗಬಾರದು. ನಮ್ಮ ಅಸ್ಮಿತೆಗಳ ರಕ್ಷಣೆಗಾಗಿ ನಾವು ಈಗ ಒಗ್ಗಟ್ಟಿನಿಂದ ಇರಬೇಕಾದ ಕಾಲ ಎಂಬುದನ್ನು ಸ್ಟಾಲಿನ್ ಗಮನಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರಕ್ಕೆ ನನ್ನನ್ನು ಏನೂ ಮಾಡಲು ಸಾಧ್ಯವಾಗಲಿಲ್ಲ: ಮಮತಾ ಬ್ಯಾನರ್ಜಿ

ಮೇಕೆದಾಟು ಜಲಾಶಯದಿಂದ ತಮಿಳುನಾಡಿಗೆ ತೊಂದರೆ ಇಲ್ಲ:ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯವನ್ನು ಆಗಲು ಬಿಡಲಿ. ಇದರಿಂದ ತಮಿಳುನಾಡಿಗೆ ಯಾವ ತೊಂದರೆಯೂ ಇಲ್ಲ ಎಂಬುದನ್ನು ಈಗಾಗಲೇ ವಿವರಿಸಲಾಗಿದೆ. ಇದು ನೀರಾವರಿ ಉದ್ದೇಶದ ಯೋಜನೆಯಲ್ಲ. ಬದಲಿಗೆ ಕುಡಿಯುವ ನೀರಿನ ಉದ್ದೇಶದ ಯೋಜನೆಯಾಗಿದೆ. ಈ ವಿಚಾರವನ್ನು ಸ್ಟಾಲಿನ್ ಅವರು ಗಮನಿಸಬೇಕು. ಜಲಾಶಯದ ವಿಚಾರದಲ್ಲಿ ಕರ್ನಾಟಕದೊಂದಿಗೆ ಸಹಕರಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷಗಳಿಂದ ಕರ್ನಾಟಕ ತಮಿಳುನಾಡಿಗೆ ನಿಗದಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಕೊಟ್ಟಿದೆ. ಪಕೃತಿ ಸಹಕರಿಸಿದಾಗ ಹೆಚ್ಚಿನ ನೀರನ್ನು ಹರಿಸಿದೆ. ಬರಗಾಲದಂಥ ಸಂದರ್ಭದಲ್ಲೂ ಕರ್ನಾಟಕವು ತಮಿಳುನಾಡಿಗೆ ಎಂದೂ ದ್ರೋಹ ಬಗೆದಿಲ್ಲ. ಹೀಗಾಗಿ ನೀರಿನ ಹಂಚಿಕೆ ವಿಚಾರದಲ್ಲಿ ಸೋದರ ಸ್ಟಾಲಿನ್ ಅವರಿಗೆ ಯಾವ ಅನುಮಾನಗಳೂ, ಆತಂಕಗಳೂ ಬೇಡ.

ತಮಿಳುನಾಡು ರೈತರನ್ನು ವಂಚಿಸಿ ಕರ್ನಾಟಕ ತನ್ನ ರೈತರನ್ನು ರಕ್ಷಿಸಿದ ಉದಾಹರಣೆ ಇಲ್ಲ. ರೈತರೆಂದರೆ ರೈತರೇ, ಭೂಮಿತಾಯಿಯ ಮಕ್ಕಳು. ನಮ್ಮ ಅಣ್ಣ ತಮ್ಮಂದಿರು. ಕಾವೇರಿ ವಿಚಾರದಲ್ಲಿ ಈಗ ನಾವಿಬ್ಬರು, ಅಂದರೆ ರಾಜಕಾರಣಿಗಳೂ ಅಣ್ಣತಮ್ಮಂದಿರಾಗೋಣ. ಸೋದರ ಭಾವನೆಯೊಂದಿಗೆ ಸ್ಟಾಲಿನ್ ಒಂದು ಹೆಜ್ಜೆ ಮುಂದೆ ಬಂದರೆ ನಾನಂತೂ ಎರಡು ಹೆಜ್ಜೆ ಮುಂದಿಡುವೆ.

ಬೆಳಗಾವಿಯಲ್ಲಿ ಮಳೆ ಅಬ್ಬರ: ನದಿ ತೀರದ ಜನರಲ್ಲಿ ಆತಂಕ

ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು. ದಕ್ಷಿಣ ಭಾರತೀಯರಾಗಿ ಈಗ ನಾವು ಕಲಹ ಮಾಡುವ ಸಂದರ್ಭವಿಲ್ಲ. ಸೋದರತೆ ಮೂಲಕ ಇದನ್ನು ಬಗೆಹರಿಸಿಕೊಳ್ಳಬೇಕು. ಈ ಮೂಲಕ ನಾವು ಒಗ್ಗಟ್ಟಾಗೇ ಉಳಿಯಬೇಕು. ಸ್ಟಾಲಿನ್ ಅವರ ಅಧಿಕಾರವಧಿಯಲ್ಲಿ ಈ ಪ್ರಯತ್ನ ಆಗಲಿ. ಅದಕ್ಕೆ ನನ್ನ ಬೆಂಬಲ ಇರಲಿದೆ. ಈ ರಾಜ್ಯಗಳ ಸೋದರತೆ ರಕ್ಷಣೆ ಈಗಿನ ಅಗತ್ಯ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

'ಕರ್ನಾಟಕ ಸರ್ಕಾರವು ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಕ್ರಮವಾಗಿ ಅಣೆಕಟ್ಟು ನಿರ್ಮಿಸುತ್ತಿದೆ' ಎಂಬ ಪತ್ರಿಕಾ ವರದಿ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ದಕ್ಷಿಣ ಪೀಠ, ಮೇ 21ರಂದು ಸಮಿತಿಯೊಂದನ್ನು ರಚಿಸಿ ಸ್ಥಳ ಪರಿಶೀಲನೆಗಾಗಿ ಆದೇಶಿಸಿತ್ತು.

ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ–ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ. ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ. ಸರ್ಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲ–ಜಲ, ಭಾಷೆ–ನುಡಿಯ ಬಗ್ಗೆ ಅಕ್ಕರೆ ಇದ್ದೀತೆ?
1/10
— H D Kumaraswamy (@hd_kumaraswamy) June 18, 2021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.