ಬೆಂಗಳೂರು: ‘ಮೇಕೆದಾಟಿಗೆ ತಮಿಳುನಾಡಿನ ಒಪ್ಪಿಗೆ ಪಡೆದರೆ ಎತ್ತಿನಹೊಳೆಗೆ ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸುವುದಾಗಿ ಬಿಜೆಪಿ ಸಲಹೆಯನ್ನು ಸ್ವೀಕರಿಸುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎತ್ತಿನಹೊಳೆಗೆ ಸ್ವಾಧೀನ ಪಡಿಸಿಕೊಂಡ ಭೂಮಿಗೆ ಬದಲಿ ಭೂಮಿ ನೀಡಿದ್ದೇವೆ. ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಲೇಬೇಕು. ಇದರಲ್ಲಿ ಕೊಡಿಸುವುದೇನಿದೆ? ಅದು ಕೇಂದ್ರದ ಕರ್ತವ್ಯ’ ಎಂದರು.

ಬೆಲೆ ಏರಿಕೆಗೆ ನಾಂದಿ ಹಾಡಿದ್ದೇ ಬಿಜೆಪಿ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರನ್ನು ರಕ್ಷಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆವು. ರಾಜ್ಯದ ರೈತರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಿದ್ದೇವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿನ ದರ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡರು.

‘ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಬಿಡುಗಡೆ ವಿಚಾರ ಕೇಂದ್ರ ಸಚಿವ ಸಂಪುಟದ ಮುಂದೆ ಇದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ಯೋಜನೆಗೆ ರಾಜ್ಯ ಸರ್ಕಾರ ಮಾಡಿರುವ ಖರ್ಚು, ಕೇಂದ್ರ ನೀಡಬೇಕಿರುವ ಹಣದ ವಿವರವನ್ನು ಸಲ್ಲಿಸಲಾಗಿದೆ. ಮಹದಾಯಿ, ಮೇಕೆದಾಟು, ಕಳಸಾ–ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದು ಹೇಳಿದರು.
.ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ: ತಮಿಳುನಾಡು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.