ಬೆಂಗಳೂರು: ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಮೇಕೆದಾಟು ಯೋಜನೆಗೆ ಅಗತ್ಯವಾದ ಅನುಮತಿ ಪಡೆಯಲು ಪ್ರಧಾನ ಮಂತ್ರಿ ಹಾಗೂ ಜಲ ಶಕ್ತಿ ಸಚಿವರ ಭೇಟಿಗೆ ರಾಜ್ಯದ ಸಂಸದರ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ಪ್ರಯತ್ನಿಸುತ್ತೇನೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಕಷ್ಟ ಕಾಲದಲ್ಲಿ ತಮಿಳುನಾಡಿನ ಪಾಲಿನ ನೀರು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ ಸುಪ್ರೀಂ ಕೋರ್ಟಿನ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ; ತಮಿಳುನಾಡು, ಪುದುಚೇರಿಗೂ ಸಂದ ಜಯ’ ಎಂದು ಬಣ್ಣಿಸಿದರು.

‘ಕಾವೇರಿ ನೀರಿನ ಬಳಕೆಗಾಗಿ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ಮೇಕೆದಾಟಿನಿಂದ ಹೆಜ್ಜೆ ಹಾಕಿ ನಾವು ಹೋರಾಟ ಮಾಡಿದೆವು. ತಮಿಳುನಾಡಿನವರು ಈ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಬೇಗ ತೀರ್ಮಾನವಾಗಬೇಕು ಎಂದು ನಾವು ಕಾನೂನು ಒತ್ತಡ ಹಾಕಿದ್ದೆವು’ ಎಂದರು.

‘ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಈ ಯೋಜನೆ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟು ನೆರವಾಗಲಿದೆ. ಯೋಜನೆಗೆ ಸಂಬಂಧಿಸಿದ ಎಲ್ಲ ತೀರ್ಮಾನಗಳನ್ನು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಹೀಗಾಗಿ, ಈ ವಿಚಾರವಾಗಿ ಮತ್ತೆ ನ್ಯಾಯಾಲಯದ ಮುಂದೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದರು.

‘ನಾವು ಈಗಾಗಲೇ ಮೇಕೆದಾಟು ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಈ ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಕಂದಾಯ ಭೂಮಿ ನೀಡಲು ಸ್ಥಳ ಗುರುತಿಸಲಾಗಿದೆ. ಸಂಬಂಧಿಸಿದ ಇಲಾಖೆಗಳಿಂದ ಈ ಯೋಜನೆಗೆ ಅಗತ್ಯವಾದ ಅನುಮತಿಯನ್ನು ಕಾನೂನು ಚೌಕಟ್ಟಿನಲ್ಲಿ ಪಡೆಯಲಾಗುವುದು’ ಎಂದರು.

ಬೇರೆ ಆಯ್ಕೆ ಇಲ್ಲ: ‘ಈ ಯೋಜನೆಗೆ ಸಿಡಬ್ಲ್ಯುಸಿ ಸಹಕಾರ ನೀಡುವುದೇ’ ಎಂಬ ಪ್ರಶ್ನೆಗೆ, ‘ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಸಿಡಬ್ಲ್ಯುಸಿ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿಕೊಡಲೇಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.