ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸುವತ್ತ ಮುಂದಿನ ಹೆಜ್ಜೆ ಇಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಹಸಿರು ನಿಶಾನೆ ತೋರಿದೆ.

‘ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಸರ್ಕಾರದ ಅರ್ಜಿ ವಜಾಗೊಂಡ ಬೆನ್ನಲ್ಲೇ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ನಮ್ಮ ಪಾದಯಾತ್ರೆ, ಕಾನೂನು ಮತ್ತು ರಾಜಕೀಯ ಹೋರಾಟಕ್ಕೆ ಜಯ ಸಿಕ್ಕಿತು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮೇಕೆದಾಟು ಯೋಜನೆಗಾಗಿ ರಾಜಕೀಯ ಹೋರಾಟ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಲಾಯಿತು’ ಎಂದು ಹೇಳಿದರು.

‘ಯೋಜನೆಗೆ ಇರುವ ಅಡಚಣೆಗಳನ್ನು ನಿವಾರಿಸಿಕೊಂಡು ಮುನ್ನಡೆಯಲು ಸಿದ್ಧತೆ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಅವು ಏನೆಂಬುದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ’ ಎಂದು ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.